Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

ಡಿ.4ರಂದು ಭಾರತಕ್ಕೆ ಪುಟಿನ್‌

ಹೊಸದಿಲ್ಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 4 ಮತ್ತು 5 ರಂದು ಎರಡು ದಿನಗಳ ಪ್ರವಾಸವಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಪುಟಿನ್ ಅವರು ಡಿಸೆಂಬರ್ 4 ಮತ್ತು 5 ರಂದು ಭಾರತಕ್ಕೆ ಆಗಮಿಸಲಿದ್ದಾರೆಂದು ತಿಳಿದುಬಂದಿದೆ. ಡಿಸೆಂಬರ್ 5 ರಂದು ನಡೆಯುವ 23ನೇ ಭಾರತ-ರಷ್ಯಾ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಹಾಗೂ ವ್ಲಾಡಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ಕಳೆದ ವರ್ಷದ ಜುಲೈನಲ್ಲಿ ಪ್ರಧಾನಿ ಮೋದಿಯವರು ಮಾಸ್ಕೋಗೆ ಭೇಟಿ ನೀಡಿದ್ದರು. ಈ ವೇಳೆ ಉಭಯ ರಾಷ್ಟ್ರಗಳ ನಡುವೆ ಶಕ್ತಿ ಸಹಕಾರ ಮತ್ತು ರಕ್ಷಣಾ ತಂತ್ರಜ್ಞಾನಗಳ ಬಗ್ಗೆ ಒಪ್ಪಂದಗಳಾಗಿವೆ.

ಸದ್ಯ ಜಾಗತಿಕ ರಾಜಕೀಯ ಒತ್ತಡಗಳು ಮತ್ತು ಮಾರ್ಗಸೂಚಿಗಳ ನಡುವೆ, ರಷ್ಯಾ ತೈಲ ಆಮದುಗಳಿಗೆ ಸಂಬಂಧಿಸಿದ ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕಗಳನ್ನು ಎದುರಿಸುತ್ತಿರುವಾಗ ಈ ಭೇಟಿ ಮಹತ್ವ ಪಡೆದುಕೊಂಡಿದೆ.

Tags:
error: Content is protected !!