ನವದೆಹಲಿ: ಹಿಂಡೆನ್‌ಬರ್ಗ್ ವರದಿಯಿಂದ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ ಧಕ್ಕೆಯಾಗಿದೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿಯವರು JPC ತನಿಖೆಗೆ ಏಕೆ ಹೆದರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಪಾತ್ರವಿದೆ ಎಂದು ಹಿಂಡೆನ್‌ಬರ್ಗ್ ವರದಿ ನೀಡಿದ್ದು, ಈ ವರದಿ ಆಧರಿಸಿ ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಚಾಟಿ ಬೀಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಗಾ, ಪ್ರಧಾನಿ ಮೋದಿ ಜಿಪಿಸಿ ತನಿಖೆಗೆ ಹೆದರುವುದೇಕೆ? ಮತ್ತು ಅದು ಏನನ್ನು ಬಹಿರಂಗಪಡಿಸಬಹುದು ಎಂಬುದು ಈಗ ಸ್ಪಷ್ಟವಾಗಿದೆ.
ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ಸಂರಕ್ಷಿಸುವ ಹೊಣೆಗಾರಿಕೆ ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕವಾದ SEBI ಯ ಸಮಗ್ರತೆಯನ್ನು ಅದರ ಅಧ್ಯಕ್ಷರ ವಿರುದ್ಧದ ಆರೋಪಗಳಿಂದ ಗಂಭೀರವಾಗಿ ರಾಜಿ ಮಾಡಿಕೊಳ್ಳಲಾಗಿದೆ.
ದೇಶಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಒತ್ತುವ ಪ್ರಶ್ನೆಗಳನ್ನು ಹೊಂದಿದ್ದಾರೆ:
– ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ?
– ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ, ಯಾರು ಜವಾಬ್ದಾರರಾಗುತ್ತಾರೆ – ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷ ಅಥವಾ ಗೌತಮ್ ಅದಾನಿ?
– ಹೊರಬಿದ್ದಿರುವ ಹೊಸ ಮತ್ತು ಅತ್ಯಂತ ಗಂಭೀರ ಆರೋಪಗಳ ಬೆಳಕಿನಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ? ಎಂದು ಬರೆದುಕೊಂಡಿರುವ ರಾಹುಲ್ ಗಾಂಧಿ ಆಡಳಿತ ಪಕ್ಷಕ್ಕೆ ಚಾಟಿ ಬೀಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…