ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರು ತಮ್ಮ ಮೇಲಿರುವ ಆರೋಪಗಳನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಅವರನ್ನು ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ ಎಂದು ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌತಮ್ ಅದಾನಿ ಅವರು ಸೌರಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ ಅಧಿಕ ಲಂಚದ ಭರವಸೆಯನ್ನು ನೀಡಿದ್ದಾರೆ ಎಂಬ ಆರೋಪವನ್ನು ಸ್ವತಃ ಅದಾನಿ ಸಮೂಹವೇ ತಳ್ಳಿಹಾಕಿದೆ. ಇನ್ನು ಅದಾನಿ ಅವರು ತಪ್ಪು ಆರೋಪಗಳನ್ನು ಒಪ್ಪಿಕೊಳ್ಳುತ್ತಾರೆಂದು ಹೇಗೆ ಬಯಸುತ್ತಿರಾ? ಎಂದು ಪ್ರಶ್ನೆ ಮಾಡಿದರು. ಗೌತಮ್ ಅದಾನಿ ಖಂಡಿತವಾಗಿಯೂ ತಮ್ಮ ಮೇಲಿರುವ ಆರೋಪಗಳನ್ನು ನಿರಾಕರಿಸುತ್ತಾರೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಇನ್ನು ನಮ್ಮ ದೇಶದಲ್ಲಿ ಕೆಲವು ಸಣ್ಣ-ಪುಟ್ಟ ಆರೋಪಗಳಲ್ಲಿ ನೂರಾರು ಜನರನ್ನು ಬಂಧಿಸಲಾಗುತ್ತಿದೆ. ಆದರೆ ಒಬ್ಬ ಭಾರತೀಯ ಉದ್ಯಮಿ ಬಗ್ಗೆ ಅಮೆರಿಕಾ ದೇಶದಲ್ಲಿ ಸಾವಿರಾರು ಕೋಟಿ ರೂಪಾಯಿಯ ವಂಚನೆ ಕುರಿತು ಸಾವಿರಾರು ಪುಟಗಳ ಆರೋಪ ಪಟ್ಟಿಯನ್ನು ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಲಾಗಿದೆ. ಹೀಗಿದ್ದರೂ ನಮ್ಮ ಕೇಂದ್ರ ಸರ್ಕಾರ ಅವರನ್ನು ರಕ್ಷಿಸುತ್ತಿದ್ದು, ನ್ಯಾಯಯುತವಾಗಿ ಅವರು ಕಾರಾಗೃಹದಲ್ಲಿರಬೇಕು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…