Mysore
25
haze

Social Media

ಬುಧವಾರ, 28 ಜನವರಿ 2026
Light
Dark

ಲೋಕಸಭೆ ಸದನ| ಮತದಾರರ ಪಟ್ಟಿಯಲ್ಲಿ ದೋಷ: ಚರ್ಚೆಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಒತ್ತಾಯ

ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10) ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ವಿಪಕ್ಷಗಳು ಗದ್ದಲ ಎಬ್ಬಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವುದಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ಸ್ವೀಕರಿಸುತ್ತೇವೆ. ಆದರೆ ಈ ವಿಚಾರದ ಬಗ್ಗೆ ಚರ್ಚೆ ನಡೆಯಬೇಕೆಂದು ಮಹಾರಾಷ್ಟ್ರ ಸೇರಿದಂತೆ ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳು ಒಂದೇ ಧ್ವನಿಯಲ್ಲಿ ಪ್ರಶ್ನೆಗಳನ್ನು ಎತ್ತಿವೆ. ಹೀಗಾಗಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ರಾಜ್ಯಸಭೆಯಲ್ಲಿ ಇದೇ ವಿಚಾರದ ಬಗ್ಗೆ ಮಾತನಾಡಿದ ಸಂಸದ ಕಪಿಲ್‌ ಸಿಂಬಲ್‌ ಅವರು, ಚುನಾವಣಾ ಆಯೋಗವೂ ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಈ ವ್ಯವಸ್ಥೆ ಹೀಗೆಯೇ ಮುಂದುವರೆದರೆ ಇದು ಪ್ರಜಾಪ್ರಭುತ್ವವಾಗಲ್ಲ. ಚುನಾವಣಾ ಆಯೋಗವು ಸರ್ಕಾರಕ್ಕಾಗಿ ಲಾಬಿ ಮಾಡುತ್ತಲೇ ಇದ್ದು, ಬರುವ ಫಲಿತಾಂಶಗಳು ನಿಮ್ಮ ಮುಂದೆ ಇವೆ. ಹಾಗಾಗಿ ಈ ನೆಲದ ಮೇಲೆ ಏನಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ, ಆದರೆ ಇದನ್ನು ಪ್ರಶ್ನಿಸಲು ಯಾರೂ ಇಲ್ಲ ಎಂದು ಹೇಳಿದರು.

Tags:
error: Content is protected !!