ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10) ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ವಿಪಕ್ಷಗಳು ಗದ್ದಲ ಎಬ್ಬಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವುದಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ಸ್ವೀಕರಿಸುತ್ತೇವೆ. ಆದರೆ ಈ ವಿಚಾರದ ಬಗ್ಗೆ ಚರ್ಚೆ ನಡೆಯಬೇಕೆಂದು ಮಹಾರಾಷ್ಟ್ರ ಸೇರಿದಂತೆ ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳು ಒಂದೇ ಧ್ವನಿಯಲ್ಲಿ ಪ್ರಶ್ನೆಗಳನ್ನು ಎತ್ತಿವೆ. ಹೀಗಾಗಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ರಾಜ್ಯಸಭೆಯಲ್ಲಿ ಇದೇ ವಿಚಾರದ ಬಗ್ಗೆ ಮಾತನಾಡಿದ ಸಂಸದ ಕಪಿಲ್ ಸಿಂಬಲ್ ಅವರು, ಚುನಾವಣಾ ಆಯೋಗವೂ ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಈ ವ್ಯವಸ್ಥೆ ಹೀಗೆಯೇ ಮುಂದುವರೆದರೆ ಇದು ಪ್ರಜಾಪ್ರಭುತ್ವವಾಗಲ್ಲ. ಚುನಾವಣಾ ಆಯೋಗವು ಸರ್ಕಾರಕ್ಕಾಗಿ ಲಾಬಿ ಮಾಡುತ್ತಲೇ ಇದ್ದು, ಬರುವ ಫಲಿತಾಂಶಗಳು ನಿಮ್ಮ ಮುಂದೆ ಇವೆ. ಹಾಗಾಗಿ ಈ ನೆಲದ ಮೇಲೆ ಏನಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ, ಆದರೆ ಇದನ್ನು ಪ್ರಶ್ನಿಸಲು ಯಾರೂ ಇಲ್ಲ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…