ಬೆಂಗಳೂರು: ಇಂದು (ಜೂನ್.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕ್ಷೇತ್ರವಾದ ವಯನಾಡಿನಲ್ಲಿ ಮತ್ತೊಮ್ಮೆ ಭರ್ಜರಿ ಜಯಭೇರಿ ಬಾರಿಸುವ ಸೂಚನೆಯನ್ನು ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಇಲ್ಲಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿರುದ್ಧ ಬರೋಬ್ಬರಿ 2.43 ಲಕ್ಷ ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಆ ಮೂಲಕ ಕೇರಳದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ತನ್ನ ಗೆಲುವನ್ನು ದಾಖಲಿಸಲು ಮುಂದಾಗಿದೆ.
ಬೆಳಿಗ್ಗೆ 11.50 ರ ವೇಳೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 322941 ಮತ ಪಡೆದು ಮುನ್ನಡೆ ಸಾಧಿಸಿದರೇ, 143405 ಮತ ಪಡೆದಿರುವ ಸಿಪಿಐನ ಅನ್ನೀ ರಾಜಾ ಅವರು ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಬಿಜೆಪಿಯ ಕೆ. ಸುರೇಂದ್ರನ್ 78976ಮತ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.