ದೇಶ- ವಿದೇಶ

Loksabha Election Results 2024 : ವಯನಾಡಿನಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 2.43 ಲಕ್ಷ ಮತಗಳ ಮುನ್ನಡೆ ಸಾಧಿಸಿದ ರಾಗಾ

ಬೆಂಗಳೂರು: ಇಂದು (ಜೂನ್‌.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಕ್ಷೇತ್ರವಾದ ವಯನಾಡಿನಲ್ಲಿ ಮತ್ತೊಮ್ಮೆ ಭರ್ಜರಿ ಜಯಭೇರಿ ಬಾರಿಸುವ ಸೂಚನೆಯನ್ನು ನೀಡಿದ್ದಾರೆ.

ರಾಹುಲ್‌ ಗಾಂಧಿ ಅವರು ಇಲ್ಲಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್‌ ವಿರುದ್ಧ ಬರೋಬ್ಬರಿ 2.43 ಲಕ್ಷ ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಆ ಮೂಲಕ ಕೇರಳದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ತನ್ನ ಗೆಲುವನ್ನು ದಾಖಲಿಸಲು ಮುಂದಾಗಿದೆ.

ಬೆಳಿಗ್ಗೆ 11.50 ರ ವೇಳೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 322941 ಮತ ಪಡೆದು ಮುನ್ನಡೆ ಸಾಧಿಸಿದರೇ, 143405 ಮತ ಪಡೆದಿರುವ ಸಿಪಿಐನ ಅನ್ನೀ ರಾಜಾ ಅವರು ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಬಿಜೆಪಿಯ ಕೆ. ಸುರೇಂದ್ರನ್‌ 78976ಮತ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

4 hours ago