ನವದೆಹಲಿ: ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಅದಾನಿ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಂದರ್ಶನ ಮಾಡಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಇಂದು(ಡಿ.9) ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇನ್ನಿತರ ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯ ವೇಳೆ ಮೋದಿ ಅದಾನಿ ಏಕ್ ಹೈ ಎಂದು ಘೋಷಣೆಗಳನ್ನು ಕೂಗಿದ್ದಾರೆ.
ಈ ವೇಳೆ ರಾಹುಲ್ ಗಾಂಧಿ ಅವರು, ಅದಾನಿ ಮುಖವಾಡ ಧರಿಸಿದ್ದ ನಾಯಕನ ಬಳಿ ಅಣಕು ಸಂದರ್ಶನ ಮಾಡಿ ಸಂಸತ್ತಿನ ಕಲಾಪಗಲು ಯಾಕೆ ಸುಗಮವಾಗಿ ನಡೆಯಲು ಬಿಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರ ನೀಡಿದ ನಾಯಕ ಪ್ರತಿಕ್ರಿಯಿಸಿ ಅದನ್ನು ನಾವು ಅಮಿತ್ ಶಾ ಅವರನ್ನು ಕೇಳಬೇಕು. ಅವರು ಸಂಸತ್ ಸದನ ಕಲಾಪದಿಂದ ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಇಬ್ಬರ ಹತ್ತಿರ ಮೋದಿ, ಅದಾನಿ ನಡುವಿನ ಸಂಬಂಧದ ಬಗ್ಗೆ ಕೇಳಿದಾಗ ಆ ನಾಯಕರು ನಾವಿಬ್ಬರೂ ಒಂದೇ, ನಾನು ಹೇಳುವುದನ್ನೇ ಮೋದಿ ಅವರು ಪಾಲಿಸುತ್ತಾರೆ. ಅದು ವಿಮಾನ ನಿಲ್ದಾಣವೇ ಆಗಿರಲಿ ಅಥವಾ ಬೇರೆ ಏನೇ ಆಗಿರಲಿ ಎಂದು ಉತ್ತರ ನೀಡಿದ್ದಾರೆ.
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…