ದೇಶ- ವಿದೇಶ

ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಲು ರಾಹುಲ್ ಗಾಂಧಿ ಬದ್ಧರಾಗಿದ್ದಾರೆ : ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

ಶುಕ್ರವವಾರ ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.

 

ಪ್ರತಿಯೊಬ್ಬ ಪ್ರಜೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವುದು ಅತ್ಯಗತ್ಯ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯವನ್ನು ಬೆಂಬಲಿಸುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಮಾನತೆಯೆಂಬುದು ದೇಶದಲ್ಲಿ ಸ್ಥಾಪಿತವಾಗಿದೆಯೇ ಎಂಬ ಬಗ್ಗೆ ತಿಳಿದುಕೊಳ್ಳಲು ಇಂತಹ ಸಮೀಕ್ಷೆ ನಡೆಸಲೇಬೇಕಾಗುತ್ತದೆ. ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಬೇಕೆಂಬುದು ರಾಹುಲ್ ಗಾಂಧಿಯವರು ಬದ್ಧರಾಗಿದ್ದಾರೆ. ಕೇವಲ ಜಾತಿಗಣತಿ ಮಾಡುವ ಜೊತೆಗೆ ಆರ್ಥಿಕ ಸಾಮಾಜಿಕ ಸಮೀಕ್ಷೆ ನಡೆಸಿದಾಗ ಮಾತ್ರ, ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ. ಇದು ಭಾಗೀಧಾರಿ ನ್ಯಾಯ ಸಮ್ಮೇಳನದ ಮೂಲ ಉದ್ದೇಶ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ದೇಶದೆಲ್ಲೆಡೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

 

ಸಮೀಕ್ಷೆ ಕೇವಲ ಓಬಿಸಿ ವರ್ಗಕ್ಕೆ ಸಂಬಂಧಿಸಿದ್ದಲ್ಲ

ಏಐಸಿಸಿನ ಓಬಿಸಿ ಸಲಹಾ ಮಂಡಳಿಯಲ್ಲಿ ನಾನು ಓರ್ವ ಸದಸ್ಯನಾಗಿದ್ದು, ಜುಲೈ 15 ಹಾಗೂ 16 ರಂದು ಬೆಂಗಳೂರಿನಲ್ಲಿ ಮಂಡಳಿಯ ಪ್ರಥಮ ಸಭೆ ನಡೆದಿತ್ತು. ಎಐಸಿಸಿಯ ಹಿಂದುಳಿದ ವರ್ಗಗಳ ವಿಭಾಗಕ್ಕೆ ಡಾ.ಅನಿಲ್ ಜೈಹಿಂದ್ ಅವರು ಮುಖ್ಯಸ್ಥರಾಗಿದ್ದಾರೆ. ಆ ಸಭೆಯಲ್ಲಿ ಬೆಂಗಳೂರು ಘೋಷಣೆ ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. 2015 ರಲ್ಲಿ ಸಾಮಾಜಿಕ ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಿದ ರಾಜ್ಯ ಕರ್ನಾಟಕ. 2018ರಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಜಾತಿಗಣತಿ ವರದಿಯನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಹತ್ತು ವರ್ಷಗಳ ಹಳೆಯ ಅಂಕಿಅಂಶಗಳಾದ್ದರಿಂದ ಕಾನೂನಿನನ್ವಯ ಮರುಗಣತಿ ಮಾಡುವ ಅಗತ್ಯವಿದ್ದುದ್ದರಿಂದ, ಸರ್ಕಾರ ಕರ್ನಾಟಕದಲ್ಲಿ ಮರುಗಣತಿ ಮಾಡಲು ಕ್ರಮ ಕೈಗೊಳ್ಳುತ್ತಿದೆ. ಇದೇ ರೀತಿ ಎಲ್ಲ ರಾಜ್ಯಗಳಲ್ಲಿಯೂ ತೆಲಂಗಾಣ ಮಾದರಿಯಲ್ಲಿ ಜಾತಿಗಣತಿಯನ್ನು ಮಾಡಬೇಕೆಂದು ನಿರ್ಣಯಿಸಲಾಯಿತು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಹಿಂದುಳಿದ ವರ್ಗದ ಏಳಿಗೆಯ ವಿಷಯವನ್ನು ಮುಂಚೂಣಿಗೆ ತಂದ ನಂತರವಷ್ಟೇ, ಕೇಂದ್ರ ಸರ್ಕಾರ ಜಾತಿಗಣತಿಯನ್ನು ತಾನು ಮಾಡುವುದಾಗಿ ಹೇಳಿದೆ. 1931 ನೇ ಇಸವಿಯ ನಂತರ ದೇಶದಲ್ಲಿ ಜಾತಿಗಣತಿ ನಡೆದಿಲ್ಲ.ಈ ಸಮೀಕ್ಷೆ ಕೇವಲ ಓಬಿಸಿ ವರ್ಗಕ್ಕೆ ಸಂಬಂಧಿಸಿದ್ದಲ್ಲ. ಕರ್ನಾಟಕ ಎಲ್ಲ ಏಳು ಕೋಟಿ ಜನರ ಸಮೀಕ್ಷೆ ನಡೆಯುತ್ತದೆ ಎಂದರು.

 

 

ಮತಗಳವು: ಸದನದಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಕರ್ನಾಟಕದಲ್ಲಿ ಮತಗಳವು ಆಗಿದೆ ಎಂಬ ರಾಹುಲ್ ಗಾಂಧಿಯವರು ಪ್ರತಿಪಾದಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿತ್ತು ಮತ್ತು ಚುನಾವಣಾ ಕ್ಷೇತ್ರಕ್ಕೆ ಸಂಬಂಧಪಡದ ಹೊಸ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ರೀತಿ ಇಡೀ ದೇಶದಲ್ಲಿ ನಡೆದಿರುವ ಸಾಧ್ಯತೆಯಿದೆ.ಆದ್ದರಿಂದ ರಾಹುಲ್ ಗಾಂಧಿಯವರು ಈ ಗಂಭೀರ ವಿಚಾರವನ್ನು ಸದನದ ಒಳಗೆ ಹಾಗೂ ಹೊರಗೆ ಪ್ರಸ್ತಾಪಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಎಲ್ಲ ಕ್ಷೇತ್ರದಲ್ಲಿ ಮತಎಣಿಕೆಯಲ್ಲಿ ಕಾಂಗ್ರೆಸ್ ಮುಂದಿದ್ದರೂ, ಮಹದೇವಪುರ ಕ್ಷೇತ್ರದಿಂದಾಗಿ ಕಾಂಗ್ರೆಸ್ ಸೋಲುವಂತಾಯಿತು. ಈ ರೀತಿ ಆಗಿರುವುದನ್ನು ಪ್ರಶ್ನಿಸಿದ ರಾಹುಲ್ ಗಾಂಧಿಯವರು, ಈ ಬಗ್ಗೆ ಸಾಕ್ಷ್ಯಾಧಾರಗಳು ಇವೆ ಎಂದು ತಿಳಿಸಿರುವುದಾಗಿ ಎಂದರು.

 

ಮತಗಳವು :ಕರ್ನಾಟಕದ ಆಯ್ದ ಕ್ಷೇತ್ರಗಳಲ್ಲಿ ನಡೆದಿರಬಹುದು

ಮತಗಳವು ಆಗಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದಿತ್ತು, ಆದರೆ ಕಾಂಗ್ರೆಸ್ ನವರು ಚುನಾವಣಾ ಆಯೋಗಕ್ಕೆ ದೂರು ನೀಡಿಲ್ಲ ಎಂದು ಚುನಾವಣಾ ಆಯೋಗ ಹೇಳಿರುವ ಬಗ್ಗೆ ಉತ್ತರಿಸಿ, ಚುನಾವಣೆಗೆ ಸಂಬಂಧಿಸಿದ ಪ್ರಕರಣಗಳು ಇತ್ಯರ್ಥವಾಗುವುದರೊಳಗೆ ಸರ್ಕಾರದ ಅವಧಿಯೇ ಮುಗಿದಿರುತ್ತದೆ. ಹಲವು ಪ್ರಕರಣಗಳಲ್ಲಿ ಮತಪಟ್ಟಿ ವಿಚಾರದಲ್ಲಿ ಚುನಾವಣಾ ಆಯೋಗ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆಲವು ಆಯ್ದ ಮತಕ್ಷೇತ್ರಗಳಲ್ಲಿ ಮಾತ್ರ ಮತಗಳವು ಆಗಿದೆ ಎಂದರು.ಬಿಹಾರದ ರೀತಿಯಲ್ಲಿ ದೇಶದ ಉಳಿದೆಡೆಗಳಲ್ಲೂ ಮತಪಟ್ಟಿ ಪರಿಷ್ಕರಣೆ ಮಾಡುವುದಾಗಿ ಚುನಾವಣಾ ಆಯೋಗ ತಿಳಿಸಿರುವ ಬಗ್ಗೆ ಉತ್ತರಿಸಿ, ಚುನಾವಣೆಯ ದಿನ ಬೇರೆಯೇ ಮತದಾರರ ಪಟ್ಟಿ ಬರುವಂತೆ ಮಾಡುತ್ತಾರೆ ಎಂದರು.

 

ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ

ಕಾಂಗ್ರೆಸ್ ನ ರಣದೀಪ್ ಸುರ್ಜೆವಾಲಾ ಅವರು ರಾಜ್ಯದ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದಂತೆ, ಉತ್ತರಭಾರತೀಯ ಹಿರಿಯ ಅಧಿಕಾರಿಗಳೊಂದಿಗೂ ಸಭೆ ನಡೆಸಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಅಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

9 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

9 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

11 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

11 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

11 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

11 hours ago