ನವದೆಹಲಿ: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೆರಡು ನೋಟಿಸ್ ಜಾರಿಯಾಗಿದೆ.
ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದ್ದು, ತಮ್ಮ ಆರೋಪಗಳಿಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದೆ.
ಆಗಸ್ಟ್.7ರಂದು ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ್ದರು. ಮರುದಿನ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮತಗಳ್ಳತನದ ಬಗ್ಗೆ ಗಂಭೀರ ಆರೋಪ ಮಾಡಿದ್ದರು.





