rahulgandhi
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್ ನಿರ್ದೇಶನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ನಿರ್ಧಾರವು ಹಲವು ವರ್ಷಗಳಿಂದ ಅನುಸರಿಸುತ್ತಿರುವ ಮಾನವೀಯ ಹಾಗೂ ವಿಜ್ಞಾನಾಧಾರಿತ ನೀತಿಯಿಂದ ಹಿಂದಕ್ಕೆ ಸರಿದಂತಾಗಿದೆ. ಮೂಖ ಜೀವಿಗಳು ಅಳಿಸಬೇಕಾದ ಸಮಸ್ಯೆಗಳಲ್ಲ. ಶಸ್ತ್ರಚಿಕಿತ್ಸೆ, ಲಸಿಕೆ ಹಾಗೂ ಸಮುದಾಯದ ಕಾಳಜಿ ಮೂಲಕ ಬೀದಿ ನಾಯಿಗಳನ್ನು ಕ್ರೂರತೆ ಇಲ್ಲದೆ ಸುರಕ್ಷಿತವಾಗಿರಿಸಬಹುದು ಎಂದು ಹೇಳಿದ್ದಾರೆ.
ಸಾಮೂಹಿಕವಾಗಿ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದು ಕ್ರೂರ, ದೂರದೃಷ್ಟಿಯಿಲ್ಲದ ಕ್ರಮವಾಗಿದೆ. ಸುಪ್ರೀಂಕೋರ್ಟ್ ಮಾನವೀಯತೆ ಹಾಗೂ ಸಹಾನುಭೂತಿಯಿಲ್ಲದೇ ಕಾನೂನನ್ನು ಪಕ್ಕಕ್ಕೆ ಸರಿಸಿದೆ. ಸಾರ್ವಜನಿಕ ಸುರಕ್ಷತೆ ಹಾಗೂ ಪ್ರಾಣಿಗಳ ಕಾಳಜಿ ಎರಡನ್ನೂ ಒಟ್ಟಿಗೆ ಮಾಡಬಹುದು ಎಂದು ಹೇಳಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…