ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ವಿಚಾರದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.
ಅಧಿಕೃತ ಸ್ಮಾರಕ ನಿರ್ಮಿಸುವ ಸ್ಥಳದ ಬದಲು ನಿಗಮಬೋಧ ಘಾಟ್‌ನಲ್ಲಿ ಅಂತ್ಯಸಂಸ್ಕಾರ ಮಾಡುವ ಮೂಲಕ ಮನಮೋಹನ್ ಸಿಂಗ್ ಹಾಗೂ ಅವರ ಸಮುದಾಯವನ್ನು ಅಪಮಾನಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಿಗಮ್ ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಸುವ ಮೂಲಕ ಭಾರತದ ಹೆಮ್ಮೆಯ ಪುತ್ರ, ಸಿಖ್ ಸಮುದಾಯದ ಮೊದಲ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸರ್ಕಾರ ಸಂಪೂರ್ಣವಾಗಿ ಅಪಮಾನಿಸಿದೆ ಎಂದು ಟೀಕೆ ಮಾಡಿದ್ದಾರೆ.
ಅತ್ಯಂತ ಗೌರವಯುವ ಹಾಗೂ ಸ್ಮಾರಕ ನಿರ್ಮಿಸುವ ಸ್ಥಳದಲ್ಲಿ ಅಂತ್ಯ ಸಂಸ್ಕಾರ ಮಾಡಲು ಮನಮೋಹನ್ ಸಿಂಗ್ ಅರ್ಹರಾಗಿದ್ದರು.
ದೇಶದ ಹೆಮ್ಮೆಯ ಪುತ್ರ ಹಾಗೂ ಅವರ ಹೆಮ್ಮು ಸಮುದಾಯಕ್ಕೆ ಸರ್ಕಾರ ಗೌರವ ತೋರಿಸಬೇಕಿತ್ತು. ಆದರೆ ಅದು ಸಾಧ್ಯವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಶಕಗಳ ಕಾಲ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ದೇಶ ಆರ್ಥಿಕವಾಗಿ ಸೂಪರ್ ಪವರ್ ಆಗಿತ್ತು. ಅವರ ಸರ್ಕಾರದ ನೀತಿಗಳು ಇಂದಿನ ದೇಶದ ಬಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಹೇಳಿದರು.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…