ದೇಶ- ವಿದೇಶ

ಮೋಹನ್‌ ಭಾಗವತ್‌ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ದೇಶದ್ರೋಹ ಎಸಗಿದ್ದು, ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ನಿಜವಾದ ಸ್ವಾತಂತ್ರ್ಯ 1947ರಲ್ಲಿ ಸಿಕ್ಕಿಲ್ಲ. ರಾಮಮಂದಿರ ಪ್ರತಿಷ್ಠಾಪನಾ ದಿನದಂದು ಸಿಕ್ಕಿತು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆ ನೀಡಿದ್ದರು.

ಮೋಹನ್‌ ಭಾಗವತ್‌ ಹೇಳಿಕೆ ವಿರುದ್ಧ ಕಾಂಗ್ರೆಸ್‌ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ರಾಹುಲ್‌ ಗಾಂಧಿ ಕೂಡ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಜನರು ಅಂತಹ ಅಸಂಬದ್ಧ ಮಾತುಗಳನ್ನು ಕೇಳುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದರು.

ಮೋಹನ್‌ ಭಾಗವತ್‌ ಅವರು ಸ್ವಾತಂತ್ರ್ಯ ಚಳುವಳಿ ಹಾಗೂ ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ದೇಶಕ್ಕೆ ಹೇಳುವ ಧೈರ್ಯ ಹೊಂದಿದ್ದಾರೆ. ಅವರು ನಿನನೆ ದೇಳಿದ್ದು ದೇಶದ್ರೋಹ. ಏಕೆಂದರೆ ಅವರು ಸಂವಿಧಾನ ಅಮಾನ್ಯವಾಗಿದೆ ಮತ್ತು ಬ್ರಿಟಿಷರ ವಿರುದ್ಧದ ಹೋರಾಟವೂ ಅಮಾನ್ಯ ಎಂದು ಹೇಳುತ್ತಿದ್ದಾರೆ ಎಂದರು.

ಇದನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನ ಅವರಿಗೆ ಇದೆ. ಬೇರೆ ಯಾವುದೇ ದೇಶದಲ್ಲಿ ಈ ರೀತಿ ಹೇಳಿದ್ದರೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ. ಇದು ಸತ್ಯ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

8 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

12 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

12 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

13 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

13 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago