ದೇಶ- ವಿದೇಶ

ಸ್ಮೃತಿ ಇರಾನಿ ಬೆಂಬಲಕ್ಕೆ ನಿಂತ ರಾಹುಲ್‌ ಗಾಂಧಿ!

ನವದೆಹಲಿ: 2019ರಲ್ಲಿ ರಾಹುಲ್‌ ಗಾಂಧಿ ಅವರನ್ನು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಸೋಲಿಸಿ ಸಂಚಲನ ಮೂಡಿಸಿದ್ದ ಸ್ಮೃತಿ ಇರಾನಿ ಬದಲಾದ ರಾಜಕೀಯ ಘಟ್ಟದಲ್ಲಿ ರಾಹುಲ್‌ ಕುಟುಂಬದ ಆಪ್ತ ಕಿಶೋರ್‌ ಲಾಲ್‌ ಶರ್ಮಾ ಅವರಿಂದ ಸೋಲನ್ನು ಅನುಭವಿಸಿದ್ದಾರೆ.

ಸೊಲುಂಡ ಇರಾನಿ ಅವರ ವಿರುದ್ಧ ನಿಂದನೆ ಹಾಗೂ ಅವರು ತಮ್ಮ ದೆಹಲಿಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ನೆಟ್ಟಿಗರು ಇರಾನಿಯನ್ನು ಟ್ರೋಲ್‌ ಮಾಡಿ ಅಪಹಸ್ಯ ಮಾಡುತ್ತಿದ್ದಾರೆ. ಈ ಹಿನ್ನಲೆ ತಕ್ಷಣ ತಮ್ಮ ರಾಜಕೀಯ ವಿರೋಧಿ ಇರಾನಿ ಬೆಂಬಲಕ್ಕೆ ನಿಂತ ರಾಹುಲ್‌ ಯಾವುದೇ ವ್ಯಕ್ತಿಯನ್ನು ಸೋತ ಕೂಡಲೇ ನಿಂದಿಸಬಾರದು. ನಿಂದನೆ ಶಕ್ತಿ ಇಲ್ಲ, ಅದು ದೌರ್ಬಲ್ಯ ಎಂದು ಹೇಳುವ ಮೂಲಕ ನೆಟ್ಟಿಗರ ಮನ ಗೆದ್ದಿದ್ದಾರೆ.

ರಾಜಕೀಯ ಜೀವನದಲ್ಲಿ ಸೋಲು ಮತ್ತು ಗೆಲುವುಗಳ ಸಂಭವಿಸುತ್ತವೆ. ಈ ಬಗ್ಗೆ ಅವಹೇಳನೆ ಹಾಗೂ ನಿಂದನೆ ಸರಿಯಲ್ಲ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ ರಾಜಕೀಯ ಎದುರಾಳಿ ಸ್ಮೃತಿ ಇರಾನಿ ಬೆಂಬಲಕ್ಕೆ ಬರುವ ಮೂಲಕ ಜನರ ಮನ ಸೆಳೆದಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

3 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

7 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

7 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

8 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

8 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

9 hours ago