Mysore
28
overcast clouds

Social Media

ಶನಿವಾರ, 23 ಮೇ 2026
Light
Dark

ಸೆಪ್ಟೆಂಬರ್.‌8ರಿಂದ ರಾಹುಲ್‌ ಗಾಂಧಿ ಅಮೆರಿಕ ಪ್ರವಾಸ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸೆಪ್ಟೆಂಬರ್.‌8ರಿಂದ 10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೊಡಾ ಅವರು ಈ ವಿಷಯ ಹಂಚಿಕೊಂಡಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ವಿರೋಧ ಪಕ್ಷದ ನಾಯಕರಾದ ಬಳಿಕ ಇದೇ ಮೊದಲ ಬಾರಿಗೆ ಅಮರಿಕಗೆ ಭೇಟಿ ನೀಡುತ್ತಿದ್ದಾರೆ ಎಂದಿದ್ದಾರೆ.

ಸೆಪ್ಟೆಂಬರ್.‌8ರಂದು ರಾಹುಲ್‌ ಗಾಂಧಿ ಅವರು ಡಲ್ಲಾಸ್‌ಗೆ ಹಾಗೂ ಸೆಪ್ಟೆಂಬರ್.‌9ರಂದು ವಾಷಿಂಗ್ಟನ್‌ಗೆ ಭೇಟಿ ನೀಡಲಿದ್ದಾರೆ.

ಟೆಕ್ಸಾಸ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು, ಸಂಸ್ಥೆಯ ತಜ್ಞರು ಹಾಗೂ ಸಮುದಾಯದ ಜನರೊಂದಿಗೆ ರಾಹುಲ್‌ ಗಾಂಧಿ ಸಂವಾದ ನಡೆಸಲಿದ್ದಾರೆ. ವಾಷಿಂಗ್ಟನ್‌ನಲ್ಲೂ ಇದೇ ಮಾದರಿಯ ಸಂವಾದ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇದರಲ್ಲಿ ಚಿಂತಕರು, ಪ್ರೆಸ್‌ಕ್ಲಬ್‌ ಸದಸ್ಯರು ಕೂಡ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿಯನ್ನು ಹೊರಹಾಕಿದ್ದಾರೆ.

Tags:
error: Content is protected !!