Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಬಿಜೆಪಿ ಮನುಸ್ಮೃತಿಯನ್ನು ಸಂವಿಧಾನಕ್ಕಿಂತ ಉನ್ನತ ಸ್ಥಾನದಲ್ಲಿ ಪರಿಗಣಿಸುತ್ತಿದೆ: ರಾಹುಲ್‌ ಗಾಂಧಿ

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇಂದಿನ ಅಧಿವೇಶನಗಳಲ್ಲಿ ಸಂವಿಧಾನ ಬಗ್ಗೆ ಚರ್ಚೆಗಳಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಯುವಕರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೇವಲ ಮನುಸ್ಮೃತಿ ತತ್ವವನ್ನು ಆಚರಣೆ ಮಾಡುತ್ತಿದೆ ಎಂದು ಮಹಾಭಾರತದ ಕಥೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಮಹಾಭಾರತದಲ್ಲೂ ಜಾತಿ ಪದ್ಧತಿ ರೂಢಿಯಲ್ಲಿತ್ತು. ದ್ರೋಣಾಚಾರ್ಯರೇ ಗುರು ದಕ್ಷಿಣೆಗಾಗಿ ಏಕಲವ್ಯನಿಂದ ಹೆಬ್ಬೆರಳನ್ನು ಕತ್ತರಿಸಿಕೊಡುವಂತೆ ಹೇಳಿದಂತೆಯೇ, ಇದೀಗ ಕೇಂದ್ರ ಸರ್ಕಾರ ಭಾರತದ ಯುವಕರ ಹೆಬ್ಬೆರಳನ್ನು ಕತ್ತರಿಸುವಂತಹ ಕಾರ್ಯ ಮಾಡುತ್ತಿದೆ. ಅಲ್ಲದೇ ಎಲ್ಲವನ್ನೂ ಅದಾನಿ ಸೇರಿದಂತೆ ಇನ್ನಿತರ ಕೈಗಾರಿಕೋದ್ಯಮಿಗಳ ಕೈಗೆ ನೀಡಿ ಯುವಕರ ಜೀವನವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

Tags:
error: Content is protected !!