ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ತಾವು ಪ್ರತಿನಿಧಿಸಿರುವ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು (ಜೂನ್.8) ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ವೇಣುಗೋಪಾಲ್, ಯಾವುದೇ ಸಂದರ್ಭದಲ್ಲಿಯೂ ಸಹಾ ಇದೇ ಜೂನ್.17ರ ಒಳಗಾಗಿ ರಾಹುಲ್ ಗಾಂಧಿ ತಮ್ಮ ತೀರ್ಮಾನವನ್ನು ಪ್ರಕಟಿಸಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಹುಲ್ ಗಾಂಧಿ ಸತತ ಎರಡನೇ ಅವಧಿಗೆ ಕೇರಳದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇತ್ತ ತಮ್ಮ ತಾಯಿ ಕ್ಷೇತ್ರ ರಾಯ್‌ಬರೇಲಿಯಲ್ಲಿ ಮೊದಲ ಬಾರಿ ಸ್ಪರ್ಧೆ ಮಾಡಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ತಮ್ಮ ಅಂತಿಮ ನಿರ್ಧಾರವನ್ನು ಖಚಿತವಾಗಿ ತಿಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಭಾರತೀಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವ್ಯಕ್ತಿ ಗರಿಷ್ಠ ಎರಡು ಕ್ಷೇತ್ರಗಳಲ್ಲಿ ನಿಲ್ಲಬಹುದಾಗಿದೆ. ಎರಡನ್ನೂ ಗೆದ್ದಲ್ಲಿ ಒಂದು ಪಕ್ಷವನ್ನು ಕೈಬಿಡಬೇಕಾಗುತ್ತದೆ. ಪರಿಣಾಮವಾಗಿ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲಾಗುತ್ತದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…