ದೇಶ- ವಿದೇಶ

ವಯನಾಡ್‌ ಅಥವಾ ರಾಯ್‌ಬರೇಲಿ?: ಮೂರ್ನಾಲ್ಕು ದಿನಗಳಲ್ಲಿ ರಾಗಾ ತೀರ್ಮಾನ!

ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ತಾವು ಪ್ರತಿನಿಧಿಸಿರುವ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು (ಜೂನ್‌.8) ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ವೇಣುಗೋಪಾಲ್‌, ಯಾವುದೇ ಸಂದರ್ಭದಲ್ಲಿಯೂ ಸಹಾ ಇದೇ ಜೂನ್‌.17ರ ಒಳಗಾಗಿ ರಾಹುಲ್‌ ಗಾಂಧಿ ತಮ್ಮ ತೀರ್ಮಾನವನ್ನು ಪ್ರಕಟಿಸಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್‌ ಗಾಂಧಿ ಸತತ ಎರಡನೇ ಅವಧಿಗೆ ಕೇರಳದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇತ್ತ ತಮ್ಮ ತಾಯಿ ಕ್ಷೇತ್ರ ರಾಯ್‌ಬರೇಲಿಯಲ್ಲಿ ಮೊದಲ ಬಾರಿ ಸ್ಪರ್ಧೆ ಮಾಡಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ತಮ್ಮ ಅಂತಿಮ ನಿರ್ಧಾರವನ್ನು ಖಚಿತವಾಗಿ ತಿಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಭಾರತೀಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವ್ಯಕ್ತಿ ಗರಿಷ್ಠ ಎರಡು ಕ್ಷೇತ್ರಗಳಲ್ಲಿ ನಿಲ್ಲಬಹುದಾಗಿದೆ. ಎರಡನ್ನೂ ಗೆದ್ದಲ್ಲಿ ಒಂದು ಪಕ್ಷವನ್ನು ಕೈಬಿಡಬೇಕಾಗುತ್ತದೆ. ಪರಿಣಾಮವಾಗಿ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲಾಗುತ್ತದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago