ದೇಶ- ವಿದೇಶ

ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆ ಮಾಡುತ್ತೇವೆ: ರಾಹುಲ್‌ ಗಾಂಧಿ

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್‌ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು, ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತೇವೆ. ಲ್ಯಾಟರಲ್‌ ಎಂಟ್ರಿಯಂತಹ ಬಿಜೆಪಿಯ ಸಂಚನ್ನು ವಿಫಲಗೊಳಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೇಕಡಾ 50ರ ಮೀಸಲಾತಿ ಮಿತಿಯನ್ನು ತೆರವುಗೊಳಿಸುವ ಮೂಲಕ ನಾವು ಜಾತಿ ಜನಗಣತಿಯ ಆಧಾರದ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಲಿದ್ದೇವೆ. ನಾವು ಸಂವಿಧಾನ ಉಳಿಸಿಕೊಳ್ಳಲು ಹಗಲಿರುಳು ಶ್ರಮ ವಹಿಸುತ್ತೇವೆ. ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆಯೇ ನಮ್ಮ ಮುಂದಿನ ಗುರಿ ಎಂದು ಭರವಸೆ ನೀಡಿದರು.

ಇನ್ನು ಸರ್ಕಾರದ ಉನ್ನತ ಹುದ್ದೆಗಳಿಗೆ ಲ್ಯಾಟರಲ್‌ ಎಂಟ್ರಿ ಮೂಲಕ ಖಾಸಗಿ ವಲಯದ ತಜ್ಞರು ಹಾಗೂ ಪರಿಣಿತರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್‌ ಹಾಗೂ ವಿಪಕ್ಷಗಳು ವಿರೋಧಿಸಿದ್ದವು. ಅಲ್ಲದೇ ಲ್ಯಾಟರಲ್‌ ಎಂಟ್ರಿ ಕ್ರಮವು ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ನಡೆ ಎಂದು ಆರೋಪಿಸಿದ್ದವು.

ಆಗಸ್ಟ್.‌17ರಂದು ಯುಪಿಎಸ್‌ಸಿ 45 ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪಕಾರ್ಯದರ್ಶಿಗಳನ್ನು ಲ್ಯಾಟರಲ್‌ ಎಂಟ್ರಿ ಮೂಲಕ ನೇಮಕ ಮಾಡಲು ಅಧಿಸೂಚನೆಯನ್ನು ಹೊರಡಿಸಿತು.

ಇದನ್ನು ಸರ್ಕಾರಿ ಇಲಾಖೆಗಳಲ್ಲಿ ತಜ್ಞರ ನೇಮಕಾತಿ ಎಂದು ಉಲ್ಲೇಖಿಸಲಾಗುತ್ತದೆ. ಈ ನಿರ್ಧಾರವು ಒಬಿಸಿ, ಎಸ್‌ಸಿ ಮತ್ತು ಎಸ್‌ಟಿಗಳ ಮೀಸಲಾತಿ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

10 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

11 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

11 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

11 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

11 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

11 hours ago