Mysore
26
overcast clouds

Social Media

ಮಂಗಳವಾರ, 21 ಜುಲೈ 2026
Light
Dark

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ ಮೋದಿ ಅವರ ನಿವಾಸದ ಎದುರು ಧರಣಿ ನಡೆಸಿದರು.

ರಾಹುಲ್‌ ಗಾಂಧಿ ಅವರೊಂದಿಗೆ ಸಂಸದೆ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಎಚ್.ಕೆ.ಮುನಿಯಪ್ಪ ಸೇರಿದಂತೆ ಕಾಂಗ್ರೆಸ್‌ನ ಇತರ ನಾಯಕರು ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಗಳ ಅಧಿಕೃತ ನಿವಾಸದ ಎದುರು ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೂ ಆಗ್ರಹಿಸಿ ಘೋಷಣೆ ಕೂಗಿದರು.

 

 

Tags:
error: Content is protected !!