ಸುಲ್ತಾನ್‌ಪುರ: ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ದ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಫೆ.11ರಂದು ದೂರುದಾರರನ್ನು ಪಾಟೀಸವಾಲು ಮಾಡಲಾಯಿತು ಎಂದು ರಾಹುಲ್ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಹೇಳಿದ್ದಾರೆ.
ಸವಾಲಿನ ಬಳಿಕ ಫೆ.24ರಂದು ವಿಚಾರಣೆ ನಿಗದಿಯಾಗಿತ್ತು. ಆದರೆ, ದೂರುದಾರರ ಪರ ವಕೀಲ ಸಂತೋಷ್ ಕುಮಾರ್ ಪಾಂಡೆ ನ್ಯಾಯಾಲಯಕ್ಕೆ ಹಾಜರಾಗದೇ ಇರುವ ಕಾರಣ ವಿಚಾರಣೆಯನ್ನು ಮಾರ್ಚ್6ಕ್ಕೆ ಮುಂದೂಡಲಾಗಿದೆ.
2018ರ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ದೆಹಟ್ ಪೊಲೀಸ್ ಠಾಣಾ ವ್ಯಾಪ್ತಿಯ ಗನುಮಗಿರಿ ನಿವಾಸಿಯಾಗಿರುವ ಸ್ಥಳೀಯ ಬಿಜೆಪಿ ನಾಯಕ ಮಿಶ್ರಾ ದೂರು ದಾಖಲಿಸಿದ್ದರು.
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…
ಹೊಸದಿಲ್ಲಿ : ದೇಶಾದ್ಯಂತ ಗಣರಾಜ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಭಾರತಿಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು,…
ಶತಮಾನದ ಶಾಲೆಗೆ ಹಳೆಯ ವಿದ್ಯಾರ್ಥಿಗಳು, ದಾನಿಗಳ ಆಸರೆ ಲೇಖಕ : ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು:…