ದೇಶ- ವಿದೇಶ

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆಯ ಆರ್ಭಟ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಬರೋಬ್ಬರಿ 19 ಪಟ್ಟು ಹೆಚ್ಚು ಮಳೆಯಾಗಿದೆ.

ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಭಾರೀ ಮಳೆಯಿಂದಾಗಿ 100ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿರುವ ಮಾಹಿತಿ ಲಭ್ಯವಾಗಿದೆ.

ಇನ್ನು ಮಳೆಯ ಅವಘಡಗಳಲ್ಲಿ 15 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಇನ್ನೂ ಮುಂದುವರಿದಿದ್ದು, ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

ಈ ನಡುವೆ ಇಂದೂ ಕೂಡ ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಕೆಲ ಗಂಟೆಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಬರ ತಾಂಡವ: ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…

2 hours ago

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

2 hours ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

9 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

9 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

9 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

9 hours ago