ನವದೆಹಲಿ: ಮುಂಗಾರು ಮಳೆ ದೇಶದ ಹಲವೆಡೆ ಅಬ್ಬರಿಸುತ್ತಿದೆ. ಈ ಸಂತಸದ ನಡುವೆಯೇ ಭಾರತ ಹವಾಮಾನ ಇಲಾಖೆ ಮಹತ್ವದ ಸಂಗತಿಯನ್ನು ತಿಳಿಸಿದೆ.
ಮಾನ್ಸೂನ್ ಆರಂಭವಾದಾಗಿನಿಂದ ದೇಶದಲ್ಲಿ ಸಾಮಾನ್ಯಕ್ಕಿಂತ ಶೇ.7ರಷ್ಟು ಹೆಚ್ಚಿನ ಮಳೆಯಾಗಿದೆ. ರಾಜಸ್ಥಾನ, ಲಡಾಖ್, ನಾಗಾಲ್ಯಾಂಡ್, ಮಣಿಪುರ ಮತ್ತು ಸಿಕ್ಕಿಂನಲ್ಲಿ ಅತೀ ಹೆಚ್ಚು ಮಳೆಯಾಗಿದೆ.
ಕೆಲವು ರಾಜ್ಯಗಳು ಹೆಚ್ಚಿನ ಮಳೆ ಪಡೆದಿದ್ದರೆ, ಇನ್ನು ಕೆಲವು ರಾಜ್ಯಗಳು ಸಾಮಾನ್ಯಕ್ಕಿಂತ ಕಡಿಮೆ ಕಂಡಿವೆ. ಈವರೆಗೂ ದೇಶದಲ್ಲಿ 447.8 ಮಿಮೀ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ.
ದೇಶಾದ್ಯಂತ ಉತ್ತಮ ಮಳೆಯಾಗುತ್ತಿದೆ. ಆದರೂ, ಕೆಲವೆಡೆ ಮಳೆ ಕೊರತೆ ಉಂಟಾಗಿದೆ. ದೇಶದಲ್ಲಿ ಸಾಮಾನ್ಯವಾಗಿ ಇಷ್ಟೊತ್ತಿಗಾಗಲೇ 418.9 ಮಿ ಮೀ. ಮಳೆ ಸುರಿಯುತ್ತದೆ. ಆದರೆ, ಈ ಬಾರಿ ಅದು ಹೆಚ್ಚಾಗಿದೆ ಎಂದು ತಿಳಿಸಿದೆ.
ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಹರಿಯಾಣ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಒಡಿಶಾ, ಗೋವಾ, ತ್ರಿಪುರ, ಮಿಜೋರಾಂ, ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಛತ್ತೀಸ್‍ಗಢ, ಪುದುಚೇರಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಐಎಂಡಿ ದತ್ತಾಂಶದ ಪ್ರಕಾರ, ಈ ಪ್ರದೇಶಗಳಲ್ಲಿ ಸರಾಸರಿ ಮಳೆಯೇ ಶೇಕಡಾ.19ಕ್ಕಿಂತ ಕಡಿಮೆ ಇದೆ.





