ದೇಶ- ವಿದೇಶ

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಖ್ಯಾತ ನಟರಾದ ರಜನಿಕಾಂತ್, ಕಮಲ್ ಹಾಸನ್, ಮುಖ್ಯಮಂತ್ರಿ ವಿಜಯ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು. ಭಾರತಿರಾಜ್ ಅವರ ಅಂತಿಮ ದರ್ಶನ ಪಡೆದರು.

ಅಂತಿಮ ದರ್ಶನದ ಬಳಿಕ ಮಾತನಾಡಿದ ಸಿಎಂ ವಿಜಯ್, ಅಗಲಿದ ಹೆಸರಾಂತ ನಿರ್ದೇಶಕ, ನಟ ಭಾರತಿರಾಜ್ ಅವರ ಅಂತ್ಯ ಸಂಸ್ಕಾರವನ್ನು ಸಕಲ ಗೌರವ ಗೌರವಗಳೊಂದಿಗೆ ಮಾಡುವುದಾಗಿ ತಿಳಿಸಿದರು. ರಾಷ್ಟ್ರ ಪ್ರಶಸ್ತಿ, ಪದ್ಮಶ್ರೀ ಸೇರಿದಂತೆ ಹತ್ತು ಹಲವಾರು ಗೌರವಗಳನ್ನು ಪಡೆದಿರುವ ಭಾರತಿರಾಜ್ ಅವರನ್ನು ಇದೇ ಸಂದರ್ಭದಲ್ಲಿ ವಿಜಯ್ ಸ್ಮರಿಸಿದರು.

ದಶಕಗಳ ಕಾಲ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಭಾರತಿರಾಜ್, ತಮ್ಮ ವಿಶಿಷ್ಟ ಕಥಾಹಂದರ ಹಾಗೂ ಗ್ರಾಮೀಣ ಸೊಗಡಿನ ಚಿತ್ರಗಳ ಮೂಲಕ ದಕ್ಷಿಣ ಭಾರತದ ಸಿನಿಮಾ ರಂಗಕ್ಕೆ ವಿಭಿನ್ನ ರೂಪವನ್ನು ನೀಡಿದ್ದರು. ತಮ್ಮ ಸುದೀರ್ಘ ಮತ್ತು ಅದ್ಭುತ ಸಿನಿ ಪಯಣದಲ್ಲಿ ಭಾರತಿರಾಜ ಅವರು ಕೇವಲ ನಿರ್ದೇಶನ ಮಾತ್ರವಲ್ಲದೆ, ಕಥೆಗಾರರಾಗಿ ಮತ್ತು ನಟರಾಗಿಯೂ ಗುರುತಿಸಿಕೊಂಡಿದ್ದರು.

ತಮಿಳುನಾಡಿನ ತೇಣಿ ಜಿಲ್ಲೆಯ ಒಂದು ಸಾಮಾನ್ಯ ಗ್ರಾಮೀಣ ಕುಟುಂಬದಲ್ಲಿ ಜನಿಸಿದ ಅವರು ಚಿತ್ರರಂಗಕ್ಕೆ ಬರುವ ಮುನ್ನ ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಸಿನಿಮಾ ಮೇಲಿನ ಅತಿಯಾದ ಆಸಕ್ತಿಯಿಂದಾಗಿ ನಂತರ ಚೆನ್ನೈಗೆ ವಲಸೆ ಬಂದು, ಕನ್ನಡದ ಖ್ಯಾತ ನಿರ್ದೇಶಕರಾದ ಪುಟ್ಟಣ್ಣ ಕಣಗಾಲ್ ಅವರ ಬಳಿ ಸಹ-ನಿರ್ದೇಶಕರಾಗಿ ಕೆಲಸ ಕರಗತ ಮಾಡಿಕೊಂಡಿದ್ದರು.

1977ರಲ್ಲಿ 16 ವಯತಿನಿಲೆ ಸಿನಿಮಾ ಮೂಲಕ ನಿರ್ದೇಶಕರಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಲ್ಲುಕ್ಕುಲ್ ಈರಮ್, ಕಿಝಕ್ಕೆ ಪೋಗುಮ್ ರೈಲ್, ಸಿಗಪ್ಪು ರೋಜಕ್ಕಲ್, ನಿಝಲ್ಗಲ್ ಇವರ ಸಿನಿಮಾಗಳು. ಭಾರತಿರಾಜ ಅವರ ಸಾಧನೆಗಾಗಿ ‘ಅತ್ಯುತ್ತಮ ಚಿತ್ರ’ ಹಾಗೂ ‘ಅತ್ಯುತ್ತಮ ಚಿತ್ರಕಥೆ’ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ತಮ್ಮ ಚಿತ್ರಗಳ ಮೂಲಕ ಚಿತ್ರರಂಗದ ದಿಕ್ಕನ್ನೇ ಬದಲಿಸಿದ್ದ ಈ ಮಹಾನ್ ಚೇತನದ ಅಗಲಿಕೆಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

49 mins ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

51 mins ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

54 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

56 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

1 hour ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

1 hour ago