ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ.
ಚನ್ನೈನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಜಿನಿಕಾಂತ್ ಅವರು, ವಿಜಯ್ ಮುಖ್ಯಮಂತ್ರಿಯಾಗುವುದರ ಬಗ್ಗೆ ತಮಗೆ ಅಸೂಯೆ ಇಲ್ಲ, ಏಕೆಂದರೆ ನಾನು ರಾಜಕೀಯದಲ್ಲಿಲ್ಲ ಎಂದು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.
ವಿಜಯ್ ಅವರು ತಮಿಳುನಾಡಿನ ರಾಜಕೀಯ ಇತಿಹಾಸದಲ್ಲೇ ಅದ್ವಿತೀಯ ಸಾಧನೆ ಮಾಡಿದ್ದಾರೆ. ಅವರು ಏಕಾಂಗಿಯಾಗಿ ಗೆಲುವು ಸಾಧಿಸಿದ್ದಾರೆ. ಇದು ನನಗೆ ಅಚ್ಚರಿ ಮತ್ತು ಖುಷಿ ಎರಡೂ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಎಂಜಿಆರ್ ಮತ್ತು ಎನ್ ಟಿಆರ್ ಅವರ ಸಾಧನೆಯನ್ನೂ ವಿಜಯ್ ಮೀರಿಸಿದ್ದಾರೆ. ಎಂಜಿಆರ್ ಮತ್ತು ಎನ್‍ಟಿಆರ್ ಅವರು ತಮ್ಮ ಕಾಲದಲ್ಲಿ ದೊಡ್ಡ ನಾಯಕರಾಗಿದ್ದರು. ಆದರೆ ವಿಜಯ್ ಅವರು ಅವರನ್ನೂ ಮೀರಿಸಿದಂತಹ ಸಾಧನೆ ಮಾಡಿದ್ದಾರೆ. ಇದು ತಮಿಳುನಾಡಿನ ರಾಜಕೀಯಕ್ಕೆ ಹೊಸ ಇತಿಹಾಸ ಎಂದು ಹಾಡಿ ಹೊಗಳಿದರು.
ವಿಜಯ್ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದಿಗ್ವಿಜಯ ಸಾಧಿಸಿದ್ದಾರೆ. ತಮಿಳುನಾಡಿನ ಎರಡು ದಿಗ್ಗಜ ದ್ರಾವಿಡ ಪಕ್ಷಗಳ ವಿರುದ್ಧ ಸ್ಪರ್ಧಿಸಿ, ಅವರನ್ನೂ ಸೋಲಿಸಿದ್ದಾರೆ. ಅಷ್ಟೇ ಅಲ್ಲ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧವೂ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇಷ್ಟೆಲ್ಲಾ ವಿರೋಧಗಳ ನಡುವೆಯೂ ಅವರು ಸ್ವತಂತ್ರವಾಗಿ, ಏಕಾಂಗಿಯಾಗಿ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರ ಈ ಗೆಲುವನ್ನು ರಜನಿಕಾಂತ್ ದಿಗ್ವಿಜಯ ಎಂದೇ ಕರೆದಿದ್ದಾರೆ. ಯಾರ ಸಹಾಯವೂ ಇಲ್ಲದೆ, ಯಾವ ಒಕ್ಕೂಟವೂ ಇಲ್ಲದೆ, ಕೇವಲ ತಮ್ಮ ಪಕ್ಷದ ಶಕ್ತಿಯಿಂದಲೇ ಅವರು ಇಷ್ಟು ದೊಡ್ಡ ಗೆಲುವು ಸಾಧಿಸಿದ್ದಾರೆ. ಇದು ನಿಜಕ್ಕೂ ಅಭೂತಪೂರ್ವ ಸಾಧನೆ ಎಂದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…