rajnath singh
ಭುಜ್ (ಗುಜರಾತ್) : ಆಪರೇಷನ್ ಸಿಂದೂರ ಸಮಯದಲ್ಲಿ ಭಾರತೀಯ ವಾಯುಪಡೆ ತೋರಿದ ಶೌರ್ಯವನ್ನು ಶ್ಲಾಘಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂದೂರ ಇನ್ನೂ ಮುಗಿದಿಲ್ಲ. ಈಗ ಏನಾಯಿತು ಎಂಬುದು ಕೇವಲ ಟ್ರೇಲರ್ ಎಂದು ಪ್ರತಿಪಾದಿಸಿದರು.
ಭುಜ್ ವಾಯುಪಡೆ ನಿಲ್ದಾಣದಲ್ಲಿ ವಾಯುಪಡೆಯ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಪಾಕಿಸ್ತಾನಕ್ಕೆ ಏನೆಂದು ತೋರಿಸಿದ್ದೇವೆ. ಇದು ಟ್ರೇಲರ್ ಅಷ್ಟೆ. ಸರಿಯಾದ ಸಮಯ ಬಂದಾಗ, ಪೂರ್ಣ ಚಿತ್ರಣವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಹೇಳಿದರು.
23 ನಿಮಿಷ ಸಾಕಾಗಿತ್ತು
ಆಪರೇಷನ್ ಸಿಂದೂರ ಸಮಯದಲ್ಲಿ ನಿಮ್ಮ ಶೌರ್ಯ ಭಾರತೀಯರು ಹೆಮ್ಮೆ ಪಡುವಂತಿದೆ. ಪಾಕಿಸ್ತಾನದಲ್ಲಿ ಪೋಷಿಸಲಾಗಿರುವ ಭಯೋತ್ಪಾದಕರು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರು ಅವರನ್ನು ಹತ್ತಿಕ್ಕಲು ಭಾರತೀಯ ವಾಯುಪಡೆಗೆ ಕೇವಲ 23 ನಿಮಿಷಗಳು ಸಾಕಾಗಿತ್ತು ಎಂದು ಹೇಳಿದರು.
ಭುಜ್ ವಾಯುನೆಲೆಗೆ ಭೇಟಿ
ಗುಜರಾತ್‌ನ ಭುಜ್ ವಾಯುನೆಲೆಗೆ ಇಂದು ಭೇಟಿ ನೀಡಿದ ಸಚಿವರು, ಸೇನೆಯೊಂದಿಗೆ ಸಂವಾದ ನಡೆಸಿದರು. ಕಳೆದ ವಾರ ನಡೆದ ಪಾಕಿಸ್ತಾನ ಜತೆಗಿನ ಸಂಘರ್ಷದ ವೇಳೆಯಲ್ಲಿ ಪಾಕ್ ಸೇನೆ ಈ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿತ್ತು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…