ದೇಶ- ವಿದೇಶ

ಆಪರೇಷನ್‌ ಸಿಂದೂರ ಮುಗಿದಿಲ್ಲ. ಏನಾಗಿದೆ ಎಂಬುದು ಕೇವಲ ಟ್ರೇಲರ್‌ : ರಕ್ಷಣ ಸಚಿವ ರಾಜನಾಥ್‌ ಸಿಂಗ್‌

ಭುಜ್‌ (ಗುಜರಾತ್)‌ : ಆಪರೇಷನ್‌ ಸಿಂದೂರ ಸಮಯದಲ್ಲಿ ಭಾರತೀಯ ವಾಯುಪಡೆ ತೋರಿದ ಶೌರ್ಯವನ್ನು ಶ್ಲಾಘಿಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಪರೇಷನ್‌ ಸಿಂದೂರ ಇನ್ನೂ ಮುಗಿದಿಲ್ಲ. ಈಗ ಏನಾಯಿತು ಎಂಬುದು ಕೇವಲ ಟ್ರೇಲರ್‌ ಎಂದು ಪ್ರತಿಪಾದಿಸಿದರು.

ಭುಜ್‌ ವಾಯುಪಡೆ ನಿಲ್ದಾಣದಲ್ಲಿ ವಾಯುಪಡೆಯ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಪಾಕಿಸ್ತಾನಕ್ಕೆ ಏನೆಂದು ತೋರಿಸಿದ್ದೇವೆ. ಇದು ಟ್ರೇಲರ್‌ ಅಷ್ಟೆ. ಸರಿಯಾದ ಸಮಯ ಬಂದಾಗ, ಪೂರ್ಣ ಚಿತ್ರಣವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಹೇಳಿದರು.

23 ನಿಮಿಷ ಸಾಕಾಗಿತ್ತು
ಆಪರೇಷನ್‌ ಸಿಂದೂರ ಸಮಯದಲ್ಲಿ ನಿಮ್ಮ ಶೌರ್ಯ ಭಾರತೀಯರು ಹೆಮ್ಮೆ ಪಡುವಂತಿದೆ. ಪಾಕಿಸ್ತಾನದಲ್ಲಿ ಪೋಷಿಸಲಾಗಿರುವ ಭಯೋತ್ಪಾದಕರು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರು ಅವರನ್ನು ಹತ್ತಿಕ್ಕಲು ಭಾರತೀಯ ವಾಯುಪಡೆಗೆ ಕೇವಲ 23 ನಿಮಿಷಗಳು ಸಾಕಾಗಿತ್ತು ಎಂದು ಹೇಳಿದರು.

ಭುಜ್‌ ವಾಯುನೆಲೆಗೆ ಭೇಟಿ
ಗುಜರಾತ್‌ನ ಭುಜ್‌ ವಾಯುನೆಲೆಗೆ ಇಂದು ಭೇಟಿ ನೀಡಿದ ಸಚಿವರು, ಸೇನೆಯೊಂದಿಗೆ ಸಂವಾದ ನಡೆಸಿದರು. ಕಳೆದ ವಾರ ನಡೆದ ಪಾಕಿಸ್ತಾನ ಜತೆಗಿನ ಸಂಘರ್ಷದ ವೇಳೆಯಲ್ಲಿ ಪಾಕ್‌ ಸೇನೆ ಈ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿತ್ತು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

16 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

16 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

23 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

23 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

23 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

23 hours ago