ದೇಶ- ವಿದೇಶ

ಪಾಕಿಸ್ತಾನಕ್ಕೆ ಐಎಂಎಫ್‌ ನೆರವು : ಪರಿಶೀಲಿಸುವಂತೆ ವಿಶ್ವಸಂಸ್ಥೆಗೆ ಮನವಿ ಮಾಡಿದ ರಾಜನಾಥ್‌ ಸಿಂಗ್‌

ಭುಜ್‌ (ಗುಜರಾತ್‌) : ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯು ಪಾಕಿಸ್ತಾನಕ್ಕೆ ಬಿಡುಗಡೆ ಮಾಡಿರುವ ಹಣಕಾಸು ನೆರವಿನ ಬಗ್ಗೆ ವಿಶ್ವಸಂಸ್ಥೆ ನಿಗಾ ವಹಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮನವಿ ಮಾಡಿದರು.

ಗುರುವಾರವಷ್ಟೇ ಶ್ರೀನಗರದ ವಾಯುನೆಲೆಗೆ ಭೇಟಿ ಕೊಟ್ಟ ಬೆನ್ನಲ್ಲೇ ಶುಕ್ರವಾರ ಗುಜರಾತ್‍ನ ಭುಚ್ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದ ಸೇನಾಪಡೆಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ತಮ್ಮ ಭಾಷಣದಲ್ಲಿ ಭಾರತೀಯ ವಾಯುಪಡೆಯ ಸೈನಿಕರನ್ನು ಶ್ಲಾಘಿಸಿದ ಅವರು, ಸೇನಾ ಪಡೆಗೆ ಅಭಿನಂದನೆ ಸಲ್ಲಿಸಿದರು.

ಮುಂದುವರೆದು ಪಾಕಿಸ್ತಾನಕ್ಕೆ ಐಎಂಎಫ್ ವಿಸ್ತೃತ ನಿಧಿ ಸೌಲಭ್ಯ ಕಾರ್ಯಕ್ರಮದಡಿ 1,023 ಶತಕೋಟಿ ಅಮೆರಿಕನ್ ಡಾಲರ್ ಹಣವನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳ ಪುನಶ್ಚೇತನಕ್ಕೆ ಬಳಸಿಕೊಳ್ಳುತ್ತದೆ.

ಪಾಕ್ ಭಯೋತ್ಪಾದಕರ ಮೂಲ ಚಟುವಟಿಕೆಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯನ್ನು ಬಳಕೆ ಮಾಡುತ್ತಿರುವುದಕ್ಕೆ ಸಾಕ್ಷಿಗಳು ಸಿಕ್ಕಿವೆ. ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರದಿಂದ ಧ್ವಂಸಗೊಂಡಿರುವ ಉಗ್ರರ ಕಟ್ಟಡಗಳ ಪುನಶ್ಚೇತನಕ್ಕೆ ಹಣ ಬಳಕೆ ಮಾಡುತ್ತಿದೆ. ಆದ್ದರಿಂದ ವಿಶ್ವ ಸಮುದಾಯ ಈ ರಾಷ್ಟ್ರಕ್ಕೆ ಹಣ ಬಿಡುಗಡೆ ಮಾಡಿರುವ ಅದನ್ನು ಯಾವ ಉದ್ದೇಶಕ್ಕೆ ಬಳಸಿದ್ದೇವೆ ಎಂಬ ಬಗ್ಗೆ ಸ್ಪಷ್ಟನೆ ಕೇಳುವಂತೆ ಒತ್ತಾಯಿಸಿದರು.

ನೀವು ಹಣ ನೀಡುವುದರ ಬಗ್ಗೆ ನಮ ಆಕ್ಷೇಪವಿಲ್ಲ. ಅದು ಸದುದ್ದೇಶಕ್ಕೆ ಬಳಕೆಯಾಗಿದೆ ಎಂಬುದನ್ನು ಅವಲೋಕನ ಮಾಡಬೇಕು ಎಂದು ಮನವಿ ಮಾಡಿದರು‌.

ಆಂದೋಲನ ಡೆಸ್ಕ್

Recent Posts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

28 mins ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

38 mins ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

43 mins ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

45 mins ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

48 mins ago

ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್‌ ಗೌಡ ಅರೆಸ್ಟ್‌

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…

1 hour ago