ಅಯೋಧ್ಯಾ : ಇಲ್ಲಿನ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಸೂರ್ಯನ ಕಿರಣಗಳು ಬಾಲರಾಮನ ಮೂರ್ತಿಯ ಹಣೆಯನ್ನು ಸ್ಪರ್ಶಿಸುತ್ತಿದ್ದಂತೆ, ಮಂದಿರದಲ್ಲಿ ಜೈಕಾರ ಮೊಳಗಿದವು.
ಅಯೋಧ್ಯ ರಾಮ ಮಂದಿರದಲ್ಲಿ ಪ್ರತಿ ರಾಮನವಮಿ ದಿನದಂದು ರಾಮನ ಮೂರ್ತಿಗೆ ಸೂರ್ಯ ತಿಲಕ ಇಡುವ ತಂತ್ರಜ್ಞಾನವ್ನು ಸಿಎಸ್‌ಐಆರ್ ಹಾಗೂ ಕೇಂದ್ರಿಯ ಕಟ್ಟಡ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿ ಅಳವಡಿಸಿದೆ.
ರಾಮ ಮಂದಿರದ ಮೂರನೇ ಮಹಡಿಯಲ್ಲಿ ಆಪ್ಟಿಕಲ್ ಲೆನ್ಸ್‌ವೊಂದು ಇದೆ. ಅದು ಪೈಪ್‌ಗಳಲ್ಲಿ ಅಳವಡಿಸಿರುವ ರಿಫ್ಲೆಕ್ಟರ್‌ಗಳ ಮೂಲಕ ಬೆಳಕನ್ನು ವಿಗ್ರಹದ ಹಣೆಯ ಮೆಲೆ ಮೂಡಿಸಲಿದೆ. ರಾಮನವಮಿ ದಿನದಂದು ಮಧ್ಯಾಹ್ನ 12ರಿಂದ ಸುಮಾರು 6 ನಿಮಿಷಗಳ ಕಾಲ ಸೂರ್ಯನ ಬೆಳಕು ಗರ್ಭಗುಡಿಯ ವಿಗ್ರಹದ ಹಣೆಯ ಮೇಲೆ ಬೀಳಲಿದೆ ಎಂದು ವಿಜ್ಞಾನಿ ಆರ್.ಧರ್ಮರಾಜು ತಿಳಿಸಿದರು.
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…