ಕೊಚ್ಚಿ : ವೈದ್ಯೆಯೊಬ್ಬರು ನೀಡಿದ ಅತ್ಯಾಚಾರ ದೂರಿಗೆ ಸಂಬಂಧಿಸಿದಂತೆ ವೇಡನ್ ಎಂದೇ ಖ್ಯಾತಿಯಾದ ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿಯನ್ನು ಬಂಧಿಸಲಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನದ ವಿಚಾರಣೆ ಬಳಿಕ ಕೊಚ್ಚಿಯ ತ್ರಿಕ್ಕಾಕರ ಪೊಲೀಸರು ವೇಡನ್ ಅವರನ್ನು ಬಂಧಿಸಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇರಳ ಹೈಕೋರ್ಟ್ ವೇಡನ್‌ಗೆ ಈಗಾಗಲೇ ನಿರೀಕ್ಷಣಾ ಜಾಮೀನು ನೀಡಿರುವುದರಿಂದ ವೈದ್ಯಕೀಯ ಪರೀಕ್ಷೆ ಮತ್ತು ಬಂಧನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.





