ದೇಶ- ವಿದೇಶ

ನ್ಯಾಯ ಒದಗಿಸುವುದಕ್ಕಿಂತ ಅಪರಾಧ ಮರೆಮಾಚಲು ಪ್ರಯತ್ನ: ರಾಹುಲ್‌ ಗಾಂಧಿ ಕಿಡಿ

ನವದೆಹಲಿ: ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ನ್ಯಾಯ ಒದಗಿಸುವುದಕ್ಕಿಂತ ಅಪರಾಧ ಮರೆಮಾಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಿಶುವಿಹಾರದಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಅವರು, ಸಂತ್ರಸ್ತ ಮಕ್ಕಳ ಪೋಷಕರು ದೂರು ನೀಡಿದ 12 ಗಂಟೆಗಳ ಬಳಿಕ ಎಫ್‌ಐಆರ್‌ ದಾಖಲು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣ ದಾಖಲಿಸಿಕೊಳ್ಳಲು ಜನರು ಪ್ರತಿಭಟನೆ ಮಾಡಬೇಕೇ, ಸಾರ್ವಜನಿಕರು ನ್ಯಾಯಕ್ಕಾಗಿ ಬೀದಿಗಿಳಿಯುವವರೆಗೂ ಅವರಿಗೆ ನ್ಯಾಯ ನೀಡುವ ಮೊದಲ ಹೆಜ್ಜೆ ಇಡಲಿಲ್ಲ. ನಾವು ಈಗ ಎಫ್‌ಐಆರ್‌ ದಾಖಲಿಸಲು ಪ್ರತಿಭಟನೆ ಮಾಡಬೇಕೇ ಎಂದು ಪ್ರಶ್ನಿಸಿದರು.

ನ್ಯಾಯವನ್ನು ಒದಗಿಸುವುದಕ್ಕಿಂತ ಅಪರಾಧವನ್ನು ಮರೆಮಾಚಲು ಹೆಚ್ಚಿನ ಪ್ರಯತ್ನಗಳನ್ನು ಮಾಡಲಾಗುತ್ತದೆ. ಅದರಲ್ಲಿ ಮಹಿಳೆಯರು ಹಾಗೂ ದುರ್ಬಲ ವರ್ಗದ ಜನರು ಹೆಚ್ಚಿನ ಬಲಿಪಶುಗಳಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago