ಹೊಸದಿಲ್ಲಿ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ನಲ್ಲಿ ದೊಡ್ಡ-ದೊಡ್ಡ ನಟರೊಟ್ಟಿಗೆ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ನಡುವೆ ಮಹತ್ತರ ಗೌರವೊಂದಕ್ಕೆ ರಶ್ಮಿಕಾ ಪಾತ್ರರಾಗಿದ್ದು, ಕೇಂದ್ರ ಗೃಹ ಸಚಿವಾಲಯ ಆರಂಭಿಸಿರುವ ಭಾರತದ ಸೈಬರ್ ಅಪರಾಧಗಳ ಸಮನ್ವಯ ಕೇಂದ್ರದ(ಐ4ಸಿ) ರಾಷ್ಟ್ರೀಯ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ.
ಈ ಹಿಂದೆ ರಶ್ಮಿಕ ಅವರ ಡೀಪ್ ಫೇಕ್ ವಿಡಿಯೊವೊಂದು ಈ ವರ್ಷದ ಆರಂಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ಕೇಂದ್ರ ಗೃಹ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐ4ಸಿ (ಇಂಡಿಯನ್ ಸೈಬರ್ಕ್ರೈಂ ಕೋಆರ್ಡಿನೇಷನ್ ಸೆಂಟರ್) ರಶ್ಮಿಕಾ ಮಂದಣ್ಣರನ್ನು ಭಾರತೀಯ ಸೈಬರ್ ಸುರಕ್ಷಾ ಕಾರ್ಯಕ್ರಮದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ, ಇನ್ನು ಮುಂದೆ ಅಪಾಯಕಾರಿ ಸೈಬರ್ ಕ್ರೈಂ, ಡೀಪ್ ಫೇಕ್ ವಿಡಿಯೋ, ಆನ್ಲೈನ್ ಫ್ರಾಡ್ ಇನ್ನಿತರೆ ಸೈಬರ್ ಸಂಬಂಧಿ ಅಪರಾಧಗಳ ಕುರಿತಾಗಿ ಸಾಕ್ಷರತೆ, ಜಾಗೃತೆ ಮೂಡಿಸುವ ಕಾರ್ಯವನ್ನು ಮಾಡಲಿದ್ದಾರೆ.
ಈ ಕುರಿತು ಇನ್ಸ್ಪಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, ‘ಸೈಬರ್ ಅಪರಾಧವು ಅಪಾಯಕಾರಿ ಮತ್ತು ವ್ಯಾಪಕವಾದ ಸಮಸ್ಯೆಯಾಗಿದೆ. ಅದು ಪ್ರಪಂಚದಾದ್ಯಂತ ಇರುವ ವ್ಯಕ್ತಿಗಳು, ವ್ಯವಹಾರಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ. ಸೈಬರ್ ಸಮಸ್ಯೆಯನ್ನು ಅನುಭವಿಸಿರುವ ವ್ಯಕ್ತಿಯಾಗಿ, ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ಸೈಬರ್ ಸುರಕ್ಷತೆಯ ಸಂದೇಶವನ್ನು ಪ್ರಚಾರ ಮಾಡಲು ನಾನು ಉತ್ಸುಕಗಳಾಗಿದ್ದೇನೆ. ಈ ಕಾರ್ಯದಲ್ಲಿ ನಾನು ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೇನೆ. ಈ ಸೈಬರ್ ಬೆದರಿಕೆಗಳನ್ನು ಎದುರಿಸಲು ಮತ್ತು ನಮ್ಮ ಡಿಜಿಟಲ್ ಸ್ಥಳಗಳನ್ನು ರಕ್ಷಿಸಲು ನಾವು ಒಗ್ಗೂಡುವುದು ಬಹಳ ಮುಖ್ಯವಾಗಿದೆ’ ಎಂದಿದ್ದಾರೆ.
ಕಳೆದ ವರ್ಷ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಯಾವುದೋ ಯುವತಿಯ ಅರೆಬೆತ್ತಲೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖವನ್ನು ಜೋಡಿಸಲಾಗಿತ್ತು. ವಿಡಿಯೋ ವೈರಲ್ ಆದ ಬಳಿಕ ಅಮಿತಾಬ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಹಲವರು ಆ ವಿಡಿಯೋವನ್ನು ವಿರೋಧಿಸುವ ಜೊತೆಗೆ ರಶ್ಮಿಕಾಗೆ ಬೆಂಬಲ ಸೂಚಿಸಿದ್ದರು. ಬಳಿಕ ಆ ವಿಡಿಯೋಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿತ್ತು.
ರಶ್ಮಿಕಾ ಮಂದಣ್ಣ ಪ್ರಸ್ತುತ ಕೆಲ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ನಲ್ಲಿ ವಿಕ್ಕಿ ಕೌಶನ್ ಜೊತೆ ನಟಿಸಿರುವ ‘ಛಾವಾ’ ಬಿಡುಗಡೆ ಆಗಬೇಕಿದೆ. ಇದರ ನಡುವೆ ಸಲ್ಮಾನ್ ಖಾನ್ ಜೊತೆ ‘ಸಿಖಂಧರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ನಟನೆಯ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಇನ್ನು ತೆಲುಗಿನಲ್ಲಿ ‘ಪುಷ್ಪ 2’, ‘ಗರ್ಲ್ಫ್ರೆಂಡ್’, ವಿಜಯ್ ದೇವರಕೊಂಡ ಜೊತೆಗೆ ‘ಗೀತ ಗೋವಿಂದಂ 2’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…