Mysore
32
scattered clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ರತನ್‌ ಟಾಟಾ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮುಂಬೈ: ಕೈಗಾರಿಕೋದ್ಯಮಿ ರತನ್‌ ಟಾಟಾ ಅವರ ಅಂತ್ಯಕ್ರಿಯೆಯನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಹೇಳಿದ್ದಾರೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ರತನ್‌ ಟಾಟಾ ಅವರು ವಿಧಿವಶರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಗಣ್ಯರು, ರಾಜಕಾರಣಿಗಳು ರತನ್‌ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ರತನ್‌ ಟಾಟಾ ಅವರ ನಿಧನದ ಕುರಿತು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಪೋಸ್ಟ್‌ ಮಾಡಿದ್ದು, ಇಂದು ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತದೆ.

ಗೌರವ ಸೂಚಕವಾಗಿ ಇಂದು ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು.

ಇಂದು ನಿಗದಿಯಾಗಿದ್ದು ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ರತನ್‌ ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್‌ ಪಾಯಿಂಟ್‌ನಲ್ಲಿರುವ ನ್ಯಾಷನಲ್‌ ಸೆಂಟರ್‌ ಫಾರ್‌ ಪರ್ಫಾರ್ಮಿಂಗ್‌ ಆರ್ಟ್ಸ್‌ನಲ್ಲಿ ಸಂಜೆ ನಾಲ್ಕು ಗಂಟೆಯವರೆಗೂ ಇರಿಸಲಾಗುವುದು. ಅಲ್ಲಿ ಜನರು ಅಂತಿಮ ನಮನ ಸಲ್ಲಿಸಬಹುದು. ಬಳಿಕ ವರ್ಲಿ ಪ್ರದೇಶದಲ್ಲಿ ರತನ್‌ ಟಾಟಾ ಅವರ ಅಂತ್ಯಕ್ರಿಯೆ ನಡೆಯಲಿದೆ.

 

Tags:
error: Content is protected !!