ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ರತನ್ ಟಾಟಾ ಅವರು ವಿಧಿವಶರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ರತನ್ ಟಾಟಾ ಅವರ ನಿಧನದ ಕುರಿತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪೋಸ್ಟ್ ಮಾಡಿದ್ದು, ಇಂದು ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತದೆ.
ಗೌರವ ಸೂಚಕವಾಗಿ ಇಂದು ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು.
ಇಂದು ನಿಗದಿಯಾಗಿದ್ದು ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ ಸಂಜೆ ನಾಲ್ಕು ಗಂಟೆಯವರೆಗೂ ಇರಿಸಲಾಗುವುದು. ಅಲ್ಲಿ ಜನರು ಅಂತಿಮ ನಮನ ಸಲ್ಲಿಸಬಹುದು. ಬಳಿಕ ವರ್ಲಿ ಪ್ರದೇಶದಲ್ಲಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಯಲಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…