Mysore
20
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಆಸ್ಪತ್ರೆಗೆ ದಾಖಲು

ಚೆನ್ನೈ: ಭಾರತೀಯ ರಿಸರ್ವ ಬ್ಯಾಂಕ್(ಆರ್‌ಬಿಐ)ನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರು ಮಂಗಳವಾರ ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಕ್ತಿದಾಸ್‌ ಅವರು ಸೋಮವಾರ ಕಾರ್ಯನಿಮಿತ್ತ ಚೆನ್ನೈಗೆ ತೆರಳಿದ್ದರು. ಇಂದು ಬೆಳಿಗ್ಗೆ ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಸ್‌ ಅವರು ಆರೋಗ್ಯ ಕುರಿತು ಮಾಹಿತಿ ನೀಡಿದ ಆರ್‌ಬಿಐ ವಕ್ತಾರರು, ಶಕ್ತಿದಾಸ್‌ ಅವರು ಸದ್ಯ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಮಧ್ಯಾಹ್ನವೇ ಅವರು ಬಿಡುಗಡೆಯಾಗಲಿದ್ದಾರೆ. ಯಾರು ಹೆದರಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

Tags:
error: Content is protected !!