ಹೈದರಾಬಾದ್: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ.
ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಹೀಗಾಗಿ ಯುಐ ಸಿನಿಮಾದ ಪ್ರಮೋಷನ್‌ಗಾಗಿ ಹೈದರಾಬಾದ್‌ಗೆ ತೆರಳಿದ ವೇಳೆ ಉಪೇಂದ್ರ ಅವರು ಪುಷ್ಪಾ-2 ಸಿನಿಮಾದ ನಾಯಕ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ಇಂದು(ಡಿ.14) ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿರುವ ಅಲ್ಲು ಅರ್ಜುನ್ ಮನೆಗೆ ತೆರಳಿ ಕ್ಷೇಮ-ಕುಶಲೋಪರಿಯನ್ನು ವಿಚಾರಿಸಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಲ್ಲು ಅರ್ಜುನ್ ಅವರು ಈ ಹಿಂದೆ ʼಸನ್ ಆಫ್ ಸತ್ಯಮೂರ್ತಿʼ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು. ಹಾಗಾಗಿ ಇವರಿಬ್ಬರ ಗೆಳೆತನ ಉತ್ತಮವಾಗಿದ್ದು, ತಮ್ಮ ಸಿನಿಮಾಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಉಪೇಂದ್ರ ನಟಿಸಿ ನಿರ್ಮಾಣ ಮಾಡಿರುವ ʼಯುಐʼ ಚಿತ್ರದ ಟ್ರೇಲರ್ ನೋಡಿ ಈಗಾಗಲೇ ಬಾಲಿವುಡ್ ನಟ ಅಮೀರ್ ಖಾನ್ ಟ್ರೇಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಟಾಲಿವುಡ್ ಸ್ಟೈಲಿಶ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.





