ದೇಶ- ವಿದೇಶ

ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌ನನ್ನು ಭೇಟಿಯಾದ ರಿಯಲ್‌ ಸ್ಟಾರ್‌ ಉಪ್ಪಿ

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ.

ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಹೀಗಾಗಿ ಯುಐ ಸಿನಿಮಾದ ಪ್ರಮೋಷನ್‌ಗಾಗಿ ಹೈದರಾಬಾದ್‌ಗೆ ತೆರಳಿದ ವೇಳೆ ಉಪೇಂದ್ರ ಅವರು ಪುಷ್ಪಾ-2 ಸಿನಿಮಾದ ನಾಯಕ ಅಲ್ಲು ಅರ್ಜುನ್‌ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ಇಂದು(ಡಿ.14) ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿರುವ ಅಲ್ಲು ಅರ್ಜುನ್‌ ಮನೆಗೆ ತೆರಳಿ ಕ್ಷೇಮ-ಕುಶಲೋಪರಿಯನ್ನು ವಿಚಾರಿಸಿದ್ದಾರೆ.

ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಅಲ್ಲು ಅರ್ಜುನ್‌ ಅವರು ಈ ಹಿಂದೆ ʼಸನ್‌ ಆಫ್‌ ಸತ್ಯಮೂರ್ತಿʼ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು. ಹಾಗಾಗಿ ಇವರಿಬ್ಬರ ಗೆಳೆತನ ಉತ್ತಮವಾಗಿದ್ದು, ತಮ್ಮ ಸಿನಿಮಾಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಉಪೇಂದ್ರ ನಟಿಸಿ ನಿರ್ಮಾಣ ಮಾಡಿರುವ ʼಯುಐʼ ಚಿತ್ರದ ಟ್ರೇಲರ್‌ ನೋಡಿ ಈಗಾಗಲೇ ಬಾಲಿವುಡ್‌ ನಟ ಅಮೀರ್‌ ಖಾನ್‌ ಟ್ರೇಲರ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅವರ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್‌ಬಗಾನ್‌ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…

29 mins ago

ಪಾಣಾಜೆಯಲ್ಲಿ ಅತ್ಯಧಿಕ ಮಳೆ: 16.7 ಸೆಂಟಿಮೀಟರ್ ದಾಖಲು!

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…

32 mins ago

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

4 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

4 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

4 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

5 hours ago