ನವದೆಹಲಿ: ಚತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೇ.14ಕ್ಕೆ ಮುಂದೂಡಿಕೆ ಮಾಡಿದೆ.
ಇಂದು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ನೀಡಿತ್ತು.
ಈ ಹಿನ್ನೆಲೆಯಲ್ಲಿ ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಕಳೆದ ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
ಇಂದು ಸುಪ್ರೀಂಕೋರ್ಟ್ ಆರ್ಜಿಯ ವಿಚಾರಣೆ ನಡೆಸಿದ್ದು, ಮೇ.14ರಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.





