ದೇಶ- ವಿದೇಶ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ನವದೆಹಲಿ: ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 24 ರೂ ಕಡಿಮೆ ಮಾಡಿವೆ. ಬೆಲೆ ಕಡಿತದ ಬಳಿಕ ಸಿಲಿಂಡರ್ ಬೆಲೆ 1,723 ರೂ.ಆಗಿದೆ. ಪರಿಷ್ಕ್ರತ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ಗೃಹ ಬಳಕೆಗೆ ಬಳಸುವ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿನಿಂದ 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 24 ರೂ.ಗಳಷ್ಟು ಕಡಿತವಾಗಿದೆ.

ಸ್ಥಳೀಯ ತೆರಿಗೆಗಳು ಹಾಗೂ ಸಾಗಾಣಿಕೆ ವೆಚ್ಚವನ್ನು ಆಧರಿಸಿ, ರಾಜ್ಯದಿಂದ ರಾಜ್ಯಕ್ಕೆ ಅನಿಲ ಸಿಲಿಂಡರ್ಗಳ ದರದಲ್ಲಿ ವ್ಯತ್ಯಯವಾಗುತ್ತದೆ. ದೇಶದಲ್ಲಿ ಶೇ.90 ರಷ್ಟು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ಗೃಹೋಪಯೋಗಕ್ಕೆ ಬಳಸಲಾಗುತ್ತಿದ್ದು, ಶೇ.10ರಷ್ಟು ಅನಿಲವನ್ನು ಮಾತ್ರ ವಾಣಿಜ್ಯ, ಕೈಗಾರಿಕೆ ಹಾಗೂ ವಾಹನಗಳಿಗಾಗಿ ಬಳಸಲಾಗುತ್ತಿದೆ.

ಇಂಡಿಯನ್ ಆಯಿಲ್ ಹೊರಡಿಸಿದ ಹೊಸ ದರದ ಪ್ರಕಾರ, 19 ಕೆಜಿ ಎಲ್‍ಪಿಜಿ ಸಿಲಿಂಡರ್ ಈಗ ದೆಹಲಿಯಲ್ಲಿ 1723.50 ರೂ.ಗೆ ಲಭ್ಯವಿರುತ್ತದೆ. ಮೊದಲು ಇದು 1747.50 ರೂ.ಗೆ ಲಭ್ಯವಿತ್ತು. ಇಂದಿನಿಂದಲೇ 24 ರೂಪಾಯಿಗಳಷ್ಟು ಅಗ್ಗವಾಗಿದೆ. ಇಂದಿನಿಂದ ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ 1851.50 ರೂ. ಬದಲಿಗೆ 1826 ರೂ.ಗೆ ಲಭ್ಯವಿರುತ್ತದೆ.

ಆಂದೋಲನ ಡೆಸ್ಕ್

Recent Posts

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

57 mins ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

1 hour ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

2 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

2 hours ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

2 hours ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

2 hours ago