Mysore
35
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸನ್ಸ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಶ್ರೀ ಅಮರನಾಥ ಯಾತ್ರಾ ಮಂಡಳಿಯು 550ಕ್ಕೂ ಹೆಚ್ಚು ಬ್ಯಾಂಕ್‌ಗಳಲ್ಲಿ ನೋಂದಣಿಗಳು ಲಭ್ಯವಿರುತ್ತದೆ ಎಂದು ಘೋಷಣೆ ಮಾಡಲಾಗಿದೆ. ಪ್ರತಿ ವರ್ಷ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಪ್ರಕ್ರಿಯೆಯು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದೆ.

13ರಿಂದ 70 ವರ್ಷ ವಯಸ್ಸಿನ ಯಾತ್ರಿಕರು ಮಾತ್ರ ನೋಂದಣಿಗೆ ಅರ್ಹರಾಗಿರುತ್ತಾರೆ ಎಂದು ಮಾರ್ಗಸೂಚಿಗಳು ತಿಳಿಸಿವೆ. ಆರು ವಾರಗಳಿಗಿಂತ ಹೆಚ್ಚು ಗರ್ಭಿಣಿಯರಿಗೆ ಸಹ ತೀರ್ಥಯಾತ್ರೆಯನ್ನು ಕೈಗೊಳ್ಳಲು ಅನುಮತಿ ಇಲ್ಲ. ಏಪ್ರಿಲ್.‌15ರಿಂದ ದೇಶಾದ್ಯಂತ 550ಕ್ಕೂ ಹೆಚ್ಚು ಅಧಿಕೃತ ಬ್ಯಾಂಕ್‌ ಖಾತೆಗಳಲ್ಲಿ ಯಾತ್ರಿಕರು ಅಮರನಾಥ ಯಾತ್ರೆಗೆ ನೋಂದಾಯಿಸಿಕೊಳ್ಳಬಹುದು.

Tags:
error: Content is protected !!