ನವದೆಹಲಿ: ದೆಹಲಿ ಮುಖ್ಯಮಂತ್ರಿ ಹುದ್ದೆಗೆ ರೇಖಾ ಗುಪ್ತಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಬಲ್ಲ ಮೂಲಗಳ ಪ್ರಕಾರ ಆರ್‌ಎಸ್‌ಎಸ್ ರೇಖಾ ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಅದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಪ್ಪಿಕೊಳ್ಳಲಾಗಿದೆ.
ಪಕ್ಷದ ವೀಕ್ಷಕರಾದ ರವಿಶಂಕರ್ ಪ್ರಸಾದ್ ಹಾಗೂ ಓಂ ಪ್ರಕಾಶ್ ಧಂಕರ್ ಇಬ್ಬರೂ ಪಕ್ಷದ ಕಚೇರಿಯನ್ನು ತಲುಪಿದ ಬಳಿಕ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಘೋಷಣೆಯಾಗಿದೆ.
ಈ ಹಿನ್ನೆಲೆಯಲ್ಲಿ ನಾಳೆ ರೇಖಾ ಗುಪ್ತಾ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇವರ ಜೊತೆ ಆರು ಮಂದಿ ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





