ದೇಶ- ವಿದೇಶ

ಪ.ಬಂಗಾಳಕ್ಕೆ ಅಪ್ಪಳಿಸಿದ “ರೆಮೆಲ್‌” ಚಂಡಮಾರುತ: ಅಸ್ಸಾಂನ 7 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ!

ಪಶ್ಚಿಮ ಬಂಗಾಳ: “ರೆಮೆಲ್‌” ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ. ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗದಲ್ಲಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಈ ಬೆನ್ನಲ್ಲೇ ರೆಮೆಲ್‌ ಅಬ್ಬರ ಜೋರಾಗಿದ್ದು, ಪಶ್ಚಿಮ ಬಂಗಾಳ ದಾಟಿ, ಈ ಚಂಡಮಾರುತ ಈಗ ಅಸ್ಸಾಂಗೆ ಕಾಲಿಟ್ಟಿದೆ. ತೀವ್ರ ಬಿರಗಾಳಿ ಸಹಿತ ಮಳೆಯಾಗುವ ಸಂಭವ ಇರುವುದರಿಂದ ಅಸ್ಸಾಂನ 7 ಜಿಲ್ಲೆಗಳಿಗೆ ʼರೆಡ್‌ ಅಲರ್ಟ್‌ʼ ಹಾಗೂ 11 ಜಿಲ್ಲೆಗಳಿಗೆ ʼಆರೆಂಜ್‌ ಅಲರ್ಟ್‌ʼ ಘೋಷಣೆ ಮಾಡಲಾಗಿದೆ.

ನಿನ್ನೆ (ಮೇ.26) ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ಚಂಡಮಾರುತ ಈಶಾನ್ಯ ದಿಕ್ಕಿನೆಡೆಗೆ ಚಲಿಸುವ ಮನ್ಸೂಚನೆಯಿದೆ. ಹಾಗಾಗಿ ಅಸ್ಸಾಂ ಭಾಗದಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ವಹಿಸಿ, ಎಚ್ಚರಿಕೆಯಿಂದ ಇರುವಂತೆ ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

https://x.com/ANI/status/1794912775904559403?ref_src=twsrc%5Etfw%7Ctwcamp%5Etweetembed%7Ctwterm%5E1794912775904559403%7Ctwgr%5Efca1ca5f1dfc0da6e82b7c5c577cc37a70538a63%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2024%2FMay%2F27%2Fbengal-braces-for-heavy-rains-as-cyclone-remal-makes-landfall

ಇನ್ನು ಸೋಮವಾರದಿಂದ 2 ದಿನಗಳ ಕಾಲ 42 ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಶಾನ್ಯ ಗಡಿ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಇದರ ಜೊತೆಗೆ ಇಂದು ಮತ್ತು ನಾಳೆ ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪ್ರಧಾನಿ ಸಭೆ: ರೆಮೆಲ್‌ ಚಂಡಮಾರುತ ಭಾರತಕ್ಕೆ ನುಗ್ಗಿರುವ ಬಗ್ಗೆ ಮತ್ತು ಅಗತ್ಯಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಲೋಕ ಕಲ್ಯಾಣ ಮಾರ್ಗ ನಿವಾಸದಲ್ಲಿ ಅಧಿಕಾರಿಗಳ ಸಭೆ ಕರೆದು, ಚಂಡ ಮಾರುತ ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಕಾರ್ಯಗಳ ಕುರಿತು ಪಿಎಂ ಮಾಹಿತಿ ಪಡೆದರು.

ರೆಮೆಲ್‌ ಚಂಡಮಾರುತ ಹಿನ್ನೆಲೆ ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

https://x.com/narendramodi/status/1794761016452248021

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

32 mins ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

14 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

15 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

16 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

17 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

18 hours ago