Mysore
22
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಜಾಮೀನು ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ

Renukaswamy murder case

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ಗುರುವಾರಕ್ಕೆ ಮುಂದೂಡಿಕೆಯಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 7 ಮಂದಿ ಆರೋಪಿಗಳಿಗೆ ನೀಡಿರುವ ಜಾಮೀನು ಭವಿಷ್ಯ ಇಂದು ಸುಪ್ರೀಂಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ ಎಂದು ಎಲ್ಲರೂ ಕಾಯುತ್ತಿದ್ದರು.

ಆದರೆ ನಟ ದರ್ಶನ್‌ ಪರ ವಕೀಲ ಕಪಿಲ್‌ ಸಿಬಲ್‌ ಇಂದು ವಾದ ಮಂಡಿಸಲು ಸಾಧ್ಯವಾಗದೇ ಇರುವುದರಿಂದ ಒಂದು ದಿನ ಕಾಲಾವಕಾಶ ಕೋರಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ಈ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಿದೆ.

ಕಪಿಲ್‌ ಸಿಬಲ್‌ ಬೇರೊಂದು ಕೋರ್ಟ್‌ನಲ್ಲಿ ಬ್ಯುಸಿಯಾಗಿರುವ ಕಾರಣ ವಾದ ವಿವಾದ ಆಲಿಸಿದ ಕೋರ್ಟ್‌ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

2024ರ ಜೂನ್.‌8ರಂದು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಆರು ತಿಂಗಳ ಬಳಿಕ 2024 ಡಿಸೆಂಬರ್.‌13ರಂದು ಹೈಕೋರ್ಟ್‌ ಜಾಮೀನು ನೀಡಿತ್ತು. 7 ಮಂದಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Tags:
error: Content is protected !!