Renukaswamy murder case
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಗುರುವಾರಕ್ಕೆ ಮುಂದೂಡಿಕೆಯಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳಿಗೆ ನೀಡಿರುವ ಜಾಮೀನು ಭವಿಷ್ಯ ಇಂದು ಸುಪ್ರೀಂಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ ಎಂದು ಎಲ್ಲರೂ ಕಾಯುತ್ತಿದ್ದರು.
ಆದರೆ ನಟ ದರ್ಶನ್ ಪರ ವಕೀಲ ಕಪಿಲ್ ಸಿಬಲ್ ಇಂದು ವಾದ ಮಂಡಿಸಲು ಸಾಧ್ಯವಾಗದೇ ಇರುವುದರಿಂದ ಒಂದು ದಿನ ಕಾಲಾವಕಾಶ ಕೋರಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಈ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಿದೆ.
ಕಪಿಲ್ ಸಿಬಲ್ ಬೇರೊಂದು ಕೋರ್ಟ್‌ನಲ್ಲಿ ಬ್ಯುಸಿಯಾಗಿರುವ ಕಾರಣ ವಾದ ವಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
2024ರ ಜೂನ್.8ರಂದು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಆರು ತಿಂಗಳ ಬಳಿಕ 2024 ಡಿಸೆಂಬರ್.13ರಂದು ಹೈಕೋರ್ಟ್ ಜಾಮೀನು ನೀಡಿತ್ತು. 7 ಮಂದಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…