Mysore
28
light rain

Social Media

ಬುಧವಾರ, 25 ಜೂನ್ 2025
Light
Dark

ಜನೌಷಧಿ ಕೇಂದ್ರಗಳನ್ನು ಪುನರಾರಂಭ ಮಾಡಿ: ಸಂಸದ ಗೋವಿಂದ ಕಾರಜೋಳ ಆಗ್ರಹ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್‌ ಮಾಡಿದ್ದು, ಇದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಿಯಾಯಿತಿ ದರದಲ್ಲಿ ಬಡವರಿಗೆ ಔಷಧ ಸಿಗಬೇಕು ಎನ್ನುವ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಜನೌಷಧಿ ಕೇಂದ್ರ ಸ್ಥಾಪನೆ ಮಾಡಿದ್ದರು. ಆದರೆ ಸಿದ್ದರಾಮಯ್ಯ ಸರ್ಕಾರ ಯಾವ ಪುರುಷಾರ್ಥಕ್ಕೆ ಜನೌಷಧಿ ಕೇಂದ್ರ ಬಂದ್‌ ಮಾಡಿದ್ದಾರೋ ಗೊತ್ತಿಲ್ಲ. ಖಾಸಗಿಯವರಿಗೆ ಮಣಿದು ಹೀಗೆ ಮಾಡಿರಬಹುದು ಎಂದು ಆರೋಪಿಸಿದರು.

ಇನ್ನು ಸರ್ಕಾರದ ಈ ನಿರ್ಧಾರ ದುರುದ್ದೇಶ ಇರಬಹುದು. ಖಾಸಗಿಯವರಿಗೆ ಸಹಾಯ ಮಾಡಲು ಹೀಗೆ ಮಾಡಿರಬಹುದು. ಇದನ್ನು ನಾನು ಖಂಡಿಸುತ್ತೇನೆ. ಸಿಎಂ ಸಿದ್ದರಾಮಯ್ಯ ಅವರು ಜನೌಷಧಿ ಕೇಂದ್ರಗಳನ್ನು ಬಂದ್‌ ಮಾಡಬಾರದು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Tags:
error: Content is protected !!