Govind Makthappa Karjol
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್ ಮಾಡಿದ್ದು, ಇದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಿಯಾಯಿತಿ ದರದಲ್ಲಿ ಬಡವರಿಗೆ ಔಷಧ ಸಿಗಬೇಕು ಎನ್ನುವ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಜನೌಷಧಿ ಕೇಂದ್ರ ಸ್ಥಾಪನೆ ಮಾಡಿದ್ದರು. ಆದರೆ ಸಿದ್ದರಾಮಯ್ಯ ಸರ್ಕಾರ ಯಾವ ಪುರುಷಾರ್ಥಕ್ಕೆ ಜನೌಷಧಿ ಕೇಂದ್ರ ಬಂದ್ ಮಾಡಿದ್ದಾರೋ ಗೊತ್ತಿಲ್ಲ. ಖಾಸಗಿಯವರಿಗೆ ಮಣಿದು ಹೀಗೆ ಮಾಡಿರಬಹುದು ಎಂದು ಆರೋಪಿಸಿದರು.
ಇನ್ನು ಸರ್ಕಾರದ ಈ ನಿರ್ಧಾರ ದುರುದ್ದೇಶ ಇರಬಹುದು. ಖಾಸಗಿಯವರಿಗೆ ಸಹಾಯ ಮಾಡಲು ಹೀಗೆ ಮಾಡಿರಬಹುದು. ಇದನ್ನು ನಾನು ಖಂಡಿಸುತ್ತೇನೆ. ಸಿಎಂ ಸಿದ್ದರಾಮಯ್ಯ ಅವರು ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಬಾರದು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…