Mysore
23
overcast clouds

Social Media

ಬುಧವಾರ, 22 ಏಪ್ರಿಲ 2026
Light
Dark

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ನೋಟಿಸ್‌ಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು 24 ಗಂಟೆಯ ಒಳಗಡೆ ಸ್ಪಷ್ಟಪಡಿಸುವಂತೆ ಕೇಂದ್ರ ಚುನಾವಣಾ ಆಯೋಗವು ನೋಟಿಸ್‌ನಲ್ಲಿ ಉಲ್ಲೇಖಿಸಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ಬಿಜೆಪಿ ನಿಯೋಗ ಖರ್ಗೆ ಅವರ ಹೇಳಿಕೆಯು ಮಾದರಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಆಯೋಗಕ್ಕೆ ದೂರು ನೀಡಿತ್ತು.

Tags:
error: Content is protected !!