Mysore
34
few clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಸತತ ಮೂರನೇ ಬಾರಿ ರೆಪೋ ದರ ಇಳಿಕೆ: ಸಾಲಗಾರರಿಗೆ ಗುಡ್‌ನ್ಯೂಸ್‌

ನವದೆಹಲಿ: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ.

ನಿರೀಕ್ಷೆಗೂ ಮೀರಿ 50 ಬೇಸಿಸ್‌ ಪಾಯಿಂಟ್‌ ಕಡಿತಗೊಳಿಸಿದ್ದು, ರೆಪೋ ಬಡ್ಡಿ ದರ ಶೇಕಡಾ.5.50ಗೆ ಇಳಿಕೆಯಾಗಿದೆ.

ಈ ಕುರಿತು ಮಾತನಾಡಿರುವ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರು, ಆರ್‌ಬಿಐನ ಹಣಕಾಸು ನೀತಿ ಸಮಿತಿಯು ಸಭೆ ಬಳಿಕ 50 ಮೂಲಾಂಶದಷ್ಟು ರೆಪೋ ದರ ಕಡಿಮೆ ಮಾಡಲು ನಿರ್ಧರಿಸಿದೆ.

ಇದರಿಂದ ಸಾಲ ಮತ್ತು ಇಎಂಐಗಳ ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಇದರ ಜೊತೆಗೆ ಮುಖ್ಯವಾಗಿ ಮೊಬೈಲ್‌, ಕಾರ್ಪೋರೇಟ್‌ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.

Tags:
error: Content is protected !!