ಹೊಸದಿಲ್ಲಿ: 76ನೇ ಗಣರಾಜ್ಯೋತ್ಸವ ಸಂಭ್ರಮದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಬಳಿಕ ಆಕರ್ಷಕ ಪಥಸಂಚಲನ ಆರಂಭವಾಗಿದೆ.
ಇದಕ್ಕೂ ಮುನ್ನ ಪ್ರಧಾನಮಂತ್ರಿ ಮೋದಿ ಅವರು ದಿಲ್ಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಬಳಿ ಮೋದಿ ಹಾಗೂ ಗಣ್ಯರು ಮೆರವಣಿಗೆ ವೀಕ್ಷಿಸಲು ಕರ್ತವ್ಯ ಪಥದ ವೇದಿಕೆಗೆ ತೆರಳಿದರು.