ದೇಶ- ವಿದೇಶ

ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ; ಜನತೆಗೆ ಶುಭಾ ಕೋರಿದ ಪ್ರಧಾನಿ ಮೋದಿ

ಹೊಸದಿಲ್ಲಿ : ದೇಶಾದ್ಯಂತ ಗಣರಾಜ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಭಾರತಿಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಗೌರವ ಸಮರ್ಪಿಸಲು ಅಣಿಯಾಗಿದ್ದಾರೆ. ಹೊಸದಿಲ್ಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ.

ಹೊಸದಿಲ್ಲಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ, ಪಥಸಂಚಲನ 9.30ಕ್ಕೆ ಆರಂಭ
ಜನವರಿ 26 ರಂದು ದೇಶದ 77 ನೇ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಪಥಸಂಚಲನದ ತಾಲೀಮು ಕೂಡಾ ಶುರುವಾಗಿದೆ. ಅಧಿಕೃತವಾಗಿ ಧ್ವಜಾರೋಹಣವು ರಾಷ್ಟ್ರಪತಿ ಭವನದ ಕರ್ತವ್ಯ ಪಥದಲ್ಲಿ ಬೆಳಗ್ಗೆ 9 ಗಂಟೆಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಧ್ವಜಾರೋಹಣ ಮಾಡಲಿದ್ದಾರೆ. 9-30 ರವೇಳೆಗೆ ಪಥಸಂಚಲನ ಆರಂಭ ಆಗುವ ನಿರೀಕ್ಷೆ ಇದೆ.

ಈ ಬಾರಿ ಗಣರಾಜ್ಯೋತ್ಸವ ಅತಿಥಿ ಯಾರು?
ಪ್ರತಿ ಬಾರಿಯಂತೆ ಈ ಬಾರಿಯ ಗಣರಾಜ್ಯೋತ್ಸವದ ಅತಿಥಿಯಾಗಿ ಯೂರೋಪಿಯನ್‌ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್‌ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್‌ ಡೆರ್‌ ಭಾಗಿಯಾಗಲಿದ್ದಾರೆ.

ವಂದೇಮಾತರಂ ಗೀತೆಗೆ 150ನೇ ವರ್ಷಾಚರಣೆ
ಈ ವರ್ಷದ ಗಣರಾಜ್ಯೋತ್ಸವವು ವಂದೇಮಾತರಂ ಗೀತೆಯ 150ನೇ ವರ್ಷ ಪೂರೈಸಿದ ಐತಿಹಾಸಿಕ ಕ್ಷಣಕ್ಕೂ ಸಾಕ್ಷಿಯಾಗಲಿದೆ. ಇನ್ನು, ಪಥಸಂಚಲನದಲ್ಲಿ ಭಾರತದ ಸಾಂಸ್ಕೃತಿಕ ಮತ್ತು ಸೇನಾಶಕ್ತಿ ಅನಾವರಣಗೊಳ್ಳಲಿದೆ.

ಗಣರಾಜ್ಯೋತ್ಸವ ಪಥಸಂಚಲನದ ವಿಶೇಷಗಳೇನು?
ಈ ಬಾರಿಯ ಪಥಸಂಚಲನದಲ್ಲಿ ಆಪರೇಷನ್‌ ಸಿಂಧೂರ್‌ ರಚನೆಯನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿದೆ. ಇದರಲ್ಲಿ ಎರಡು ರಫೇಲ್ ಜೆಟ್‌ಗಳು, ಎರಡು Su-30 ವಿಮಾನಗಳು, ಎರಡು MiG-29 ಯುದ್ಧ ವಿಮಾನಗಳು ಮತ್ತು ಒಂದು ಜಾಗ್ವಾರ್ ಯುದ್ಧ ವಿಮಾನ ಸೇರಿವೆ. ಪಥಸಂಚಲನದಲ್ಲಿ 30 ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ‘ಸ್ವಾತಂತ್ರ್ಯದ ಮಂತ್ರ, ವಂದೇ ಮಾತರಂ’ ಮತ್ತು ‘ಸಮೃದ್ಧಿಯ ಮಂತ್ರ, ಆತ್ಮನಿರ್ಭರ ಭಾರತ’ ಎಂಬುದು ಈ ಬಾರಿಯ ಮುಖ್ಯ ಥೀಮ್‌ಗಳಾಗಿವೆ. ಜೊತೆಗೆ 2,500 ಸಾಂಸ್ಕೃತಿಕ ಕಲಾವಿದರು ಕರ್ತವ್ಯ ಪಥದಲ್ಲಿ ವಂದೇ ಮಾತರಂ ಮತ್ತು ಸ್ವಾವಲಂಬಿ, ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಯ ಬಗ್ಗೆ ಪ್ರದರ್ಶನ ನೀಡಲಿದ್ದಾರೆ.

ಮೂವತ್ತು ಸ್ತಬ್ಧಚಿತ್ರಗಳ ಪೈಕಿ 17 ಸ್ತಬ್ಧಚಿತ್ರಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮತ್ತು 13 ಸ್ತಬ್ಧಚಿತ್ರಗಳು ಕೇಂದ್ರದ ವಿವಿಧ ಸಚಿವಾಲಯಗಳಿಂದ ಇರಲಿವೆ. ಭಾರತೀಯ ವಾಯುಪಡೆಯ ಮಾಜಿ ಸೈನಿಕರನ್ನು ಒಳಗೊಂಡ ವಿಶೇಷ ಸ್ತಬ್ಧಚಿತ್ರವೂ ಇದರಲ್ಲಿ ಪ್ರದರ್ಶಿಸಲಿವೆ.

ಸಾಂಪ್ರದಾಯಿಕ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸ್ವದೇಶಿ 105 MM ಲೈಟ್ ಫೀಲ್ಡ್‌ ಗನ್‌ಗಳನ್ನು ಬಳಸಿ 21-ಸುತ್ತಿನ ಕುಶಾಲತೋಪು ಮೂಲಕ ಕಾರ್ಯಕ್ರಮ ಆರಂಭವಾಗಲಿದೆ. ವಿವಿಧ ಕ್ಷೇತ್ರಗಳಿಂದ ಬಂದ ಸುಮಾರು 10,000 ವಿಶೇಷ ಅತಿಥಿಗಳು ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ವಿಶ್ವ ಅಥ್ಲೆಟಿಕ್ ಪ್ಯಾರಾ ಚಾಂಪಿಯನ್‌ಶಿಪ್ ವಿಜೇತರು, ಕೃಷಿಕರು, ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ, ಗಗನಯಾನ, ಚಂದ್ರಯಾನದಂತಹ ಇತ್ತೀಚಿನ ಇಸ್ರೋ ಯೋಜನೆಗಳಲ್ಲಿ ಭಾಗವಹಿಸಿದ ಅತ್ಯುತ್ತಮ ವಿಜ್ಞಾನಿಗಳು ಮತ್ತು ತಾಂತ್ರಿಕ ತಜ್ಞರು, ಹಾಗೂ ಹೈಡ್ರೋಜನ್ ಉತ್ಪಾದನೆಗೆ ಪ್ರೋತ್ಸಾಹಧನ ಪಡೆದ ಕಂಪನಿಗಳ ಮುಖ್ಯಸ್ಥರು, ಸಿಇಒಗಳನ್ನೂ ಗೌರವ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ದೆಹಲಿಯಲ್ಲಿ ಹೆಜ್ಜೆಹೆಜ್ಜೆಗೂ ಕಣ್ಗಾವಲು ಇರಿಸಲಾಗಿದೆ.

ದೆಹಲಿಯಲ್ಲಿ 7ಸುತ್ತಿನ ಕೋಟೆ ಭದ್ರತೆ
ದೆಹಲಿಯ ಪ್ರಮುಖ ರಸ್ತೆಗಳನ್ನ ಬ್ಲಾಕ್‌ ಮಾಡಲಾಗಿದ್ದು, ಹಲವು ಮಾರ್ಗಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟಾರೆ ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿ ಸಕಲ ರೀತಿಯಲ್ಲೂ ಸಜ್ಜಾಗಿದೆ. ಎಲ್ಲೆಲ್ಲೂ ಭದ್ರತೆ ಹೆಚ್ಚಿದೆ.

ದೇಶದ ಜನರಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ಗಣರಾಜ್ಯೋತ್ಸವದ ಶುಭಾಶಯಗಳು.ಈ ಸಂದರ್ಭವು ವಿಜಯಶಾಲಿ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪಕ್ಕೆ ನವೀಕೃತ ಶಕ್ತಿ ಮತ್ತು ಉತ್ಸಾಹ ಸೇರಲಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

4 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

6 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

8 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago